ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ದರ್ಶನ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪಡೆದರು.
ಬೆಳಗ್ಗೆ 10:40ರ ಸುಮಾರಿಗೆ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಮೇಯರ್ ಕವಿತಾ, ಸಚಿವ ಖಾದರ್ ಕೇಂದ್ರ ಸಚಿವ ಅನಂತ್‌ಕುಮಾರ್ ಹಾಗೂ ಬಿಜೆಪಿ ನಾಯಕರು ಆತ್ಮೀಯವಾಗಿ ಬರ ಮಾಡಿಕೊಂಡರು. ನಂತರ ಪ್ರಧಾನಿ ಹೆಲಿಕಾಪ್ಟರ್ ಮೂಲಕ ನೇರವಾಗಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದರು. ಬೆಳಗ್ಗೆ 10:40ರ ಸುಮಾರಿಗೆ ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಮೇಯರ್ ಕವಿತಾ, ಸಚಿವ ಖಾದರ್ ಕೇಂದ್ರ ಸಚಿವ ಅನಂತ್‌ಕುಮಾರ್ ಹಾಗೂ ಬಿಜೆಪಿ ನಾಯಕರು ಆತ್ಮೀಯವಾಗಿ ಬರ ಮಾಡಿಕೊಂಡರು. ನಂತರ ಪ್ರಧಾನಿ ಹೆಲಿಕಾಪ್ಟರ್ ಮೂಲಕ ನೇರವಾಗಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದರು.
ಧರ್ಮಸ್ಥಳಕ್ಕೆ ಬರುತ್ತಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ತಮ್ಮ ಕುಟುಂಬದ ಸಮೇತವಾಗಿ ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ಬಳಿಕ ದೇಗುಲ ಪ್ರವೇಶಿದ ಮೋದಿ ಅವರು, ದೇವಸ್ಥಾನದೊಳಗೆ ಮಂಜುನಾಥನಿಗೆ ರುದ್ರಾಭಿಷೇಕ ನೆರವೇರಿಸಿದರು.
ಇದಾದ ಬಳಿಕ ಸಮೀಪದ ಉಜಿರೆಯಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮೋದಿ ಭಾಗವಹಿಸಿದರು.
ಸಮಾವೇಶದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಪ್ರಧಾನಿಯವರನ್ನು ಸನ್ಮಾನಿಸಿದರು. ಪೇಟ, ರೇಷ್ಮೆ ಶಾಲು, ಗಂಧದ ಹಾರ ತೊಡಿಸಿ ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಲಾಯಿತು. ಧರ್ಮಾಧಿಕಾರಿಯಾಗಿ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದಂಗವಾಗಿ ವೀರೇಂದ್ರ ಹೆಗ್ಗಡೆಯವರನ್ನು ಪ್ರಧಾನಿ ಸನ್ಮಾನಿಸಿದರು.
ಸಮಾವೇಶದಲ್ಲಿ ಎಸ್‌ಕೆಆರ್ ಡಿಪಿಯ ಫಲಾನುಭವಿಗಳಿಗೆ ಪ್ರಧಾನಿ ಮೋದಿ ಅವರು ರುಪೆ ಕಾರ್ಡ್ ವಿತರಿಸಿದರು. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಧರ್ಮಸ್ಥಳದ ಸುತ್ತು-ಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
Click this button or press Ctrl+G to toggle between Kannada and English