ಸ್ವಸಹಾಯ ಸಂಘಗಳಲ್ಲಿ ತೊಡಗಿಸಿಕೊಂಡರೆ ಆರ್ಥಿಕ ಅಭಿವೃದ್ಧಿ ಸಾಧ್ಯ:ನರೇಂದ್ರ ಮೋದಿ

10:31 AM, Monday, October 30th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

rupay card ಮಂಗಳೂರು: ಮೀನುಗಾರಿಕೆಗೆ ರಜಾ ಇರುವ 45 ದಿನಗಳ ಅವಧಿಯಲ್ಲಿ ಬೆಳೆಯಬಹುದಾದ ಔಷಧಿ ಮಹತ್ವದ ಜಲ ಸಸ್ಯ ಕೃಷಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳು ತೊಡಗಿಸಿಕೊಂಡರೆ ಮೀನುಗಾರರೂ ಸೇರಿದಂತೆ ತಳ ಸಮುದಾಯದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಉಜಿರೆಯ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಬೃಹತ್ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರುಪೇ ಕಾರ್ಡ್ ವಿತರಣೆ, ತಂತ್ರಾಂಶ ಆಧಾರಿತ ಸ್ವ ಸಹಾಯ ಸಂಘ ನಿರ್ವಹಣೆ ಒಪ್ಪಂದ ವಿನಿಮಯ ಮತ್ತು ಭೂಮಿ ತಾಯಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸುವ ಅಭಿಯಾನಕ್ಕೆ ಅವರು ಚಾಲನೆ ನೀಡಿದರು.

rupay card ನೇರ ನಗದು ವರ್ಗಾವಣೆಯಿಂದ 57 ಸಾವಿರ ಕೋಟಿಯಷ್ಟು ಸೋರಿಕೆ ನಿಂತಿದೆ. ಸೋರಿಕೆ ಮಾಡುವವರು ಪ್ರಧಾನಿ ಮೋದಿಯನ್ನು ಮೆಚ್ಚುತ್ತಾರೆಯೇ. ಅದೇನೇ ಇರಲಿ ನಾನಿರುವ ತನಕ ದೇಶ ದಿವಾಳಿಯಾಗಲು ಬಿಡುವುದಿಲ್ಲ ಎಂದು ಹೇಳಿದರು.

ಕೇಂದ್ರ ಸಚಿವರಾದ ಅನಂತ ಕುಮಾರ್, ಡಿ.ವಿ.ಸದಾನಂದಗೌಡ, ಸಂಸದರಾದ ಬಿ. ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು, ಶಾಸಕ ವಸಂತ ಬಂಗೇರಾ, ಹೇಮಾವತಿ ಹೆಗ್ಗಡೆ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English