ಮಂಗಳೂರು: ಸಚಿವ ಜಾರ್ಜ್ ಅವರ ಮೇಲೆ ಸಿಬಿಐ ಎಫ್ಐಆರ್ ದಾಖಲಿಸಿದ ಮಾತ್ರಕ್ಕೆ ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯಪಟ್ಟಿದ್ದಾರೆ. ಸಚಿವ ರೈ ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ಹಲವಾರು ಸಚಿವರುಗಳ ಮೇಲೆ ಕ್ರಿಮಿನಲ್ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಸಚಿವ ಜಾರ್ಜ್ ಅವರ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ ಎಂದು ಅವರು ಕಿಡಿಕಾರಿದರು .
ಕಾಂಗ್ರೆಸ್ ಮೇಲೆ ಬಿಜೆಪಿ ಸುಮ್ಮನೆ ಗೂಬೆ ಕೂರಿಸಲು ಯತ್ನಿಸುತ್ತಿದೆ ಎಂದು ರೈ ಆರೋಪಿಸಿದರು. ಕೇಂದ್ರ ಸರ್ಕಾರ ಸಿಬಿಐ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ದೂರಿದ ರೈ, ‘ವಿನಾಕಾರಣ ಕಾಂಗ್ರೆಸ್ ನಾಯಕರ ಮನೆಯ ಮೇಲೆ ಐಟಿ, ಸಿಬಿಐ ದಾಳಿ ನಡೆಸಿ ಅವರ ನೈತಿಕ ಸ್ಥೈರ್ಯ ಕುಗ್ಗಿಸುವ ಯತ್ನವನ್ನು ಬಿಜೆಪಿ ಮಾಡುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿಯಲ್ಲಿ ಶೇಕಡಾ 60% ರಷ್ಟು ಅರಣ್ಯ ಭೂಮಿಯಲ್ಲಿ ಜನಾರ್ದನ ರೆಡ್ಡಿ ಕುಟುಂಬ ಅಕ್ರಮ ಗಣಿಗಾರಿಕೆ ನಡೆಸಿದೆ ಎಂದು ಸಚಿವ ರಮಾನಾಥ ರೈ ಆರೋಪಿಸಿದರು.
Click this button or press Ctrl+G to toggle between Kannada and English