- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಆಳ್ವಾಸ್ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

alvas [1]ಮೂಡುಬಿದಿರೆ: ತಲಪಾಡಿಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

20 ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ 18  ಚಿನ್ನ, 16 ಬೆಳ್ಳಿ ಮತ್ತು 1 ಕಂಚಿನ ಪದಕಗಳನ್ನು ಪಡೆದು ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ 19 ಚಿನ್ನ, 16ಬೆಳ್ಳಿ ಮತ್ತು 1 ಕಂಚಿನ ಪದಕಗಳನ್ನು ಪಡೆದು ಆಳ್ವಾಸ್ ಪ.ಪೂ. ಕಾಲೇಜು ಪ್ರಶಸ್ತಿಯನ್ನು ಪಡೆಯಿತು. ಬಾಲಕರ ವಿಭಾಗದಲ್ಲಿ ವೈಯಕ್ತಿಕ ಪ್ರಶಸ್ತಿಯನ್ನು ನವನೀತ್, ಬಾಲಕಿಯರ ವಿಭಾಗದಲ್ಲಿ ಜೋತ್ಸ್ನಾ ಮತ್ತು ಪ್ರಿಯಾ ಎಲ್.ಡಿ. ಪಡೆದರು. ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ನವೆಂಬರ್ 7, 8 ರಂದು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಹಾಗೂ ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜು, ತಲಪಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು.