ಟಿಪ್ಪು ಸುಲ್ತಾನ್ ಜಯಂತಿ: ಪೂರ್ವಭಾವಿ ಸಭೆ

5:35 PM, Tuesday, October 31st, 2017
Share
1 Star2 Stars3 Stars4 Stars5 Stars
(5 rating, 1 votes)
Loading...

tippu jayanthiಮ೦ಗಳೂರು: ನವೆಂಬರ್ 10 ರಂದು ಹಝ್ರತ್ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಮಂಗಳೂರಿನಲ್ಲಿ ಆಚರಿಸುವ ಸಂಬಂಧ ಪೂರ್ವಭಾವಿ ಸಭೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.

ಜಿಲ್ಲಾಧಿಕಾರಿ ಸಸಿಕುಮಾರ್ ಸೆಂಥಿಲ್ ಎಸ್. ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನವೆಂಬರ್ 10 ರಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಟಿಪ್ಪು ಸುಲ್ತಾನರ ಆಡಳಿತ ಮತ್ತು ಕಾರ್ಯಕ್ರಮಗಳ ಬಗ್ಗೆ ಜನರಿಗೆ ಸಂದೇಶ ಮೂಡಿಸಲು ಕಾರ್ಯಕ್ರಮ ರೂಪಿಸುವಂತೆ ಸೂಚಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ ಮಾತನಾಡಿ, ಟಿಪ್ಪು ಸುಲ್ತಾನ್ ವಿಚಾರಧಾರೆಗಳು ಐತಿಹಾಸಿಕವಾಗಿದೆ. ಜಿಲ್ಲೆಯಲ್ಲಿರುವ ಟಿಪ್ಪುಸುಲ್ತಾನ್ ಸ್ಮಾರಕಗಳು, ಅಂದಿನ ಕಟ್ಟಡಗಳನ್ನು ಸಾರ್ವಜನಿಕರಿಗೆ ಹೆಚ್ಚು ಪ್ರಚುರಪಡಿಸಿ, ಜಾಗೃತಿ ಮೂಡಿಸಲು ಟಿಪ್ಪು ಜಯಂತಿ ಕಾರ್ಯಕ್ರಮ ಪ್ರೇರಕವಾಗಬೇಕು ಎಂದು ಹೇಳಿದರು. ವಿಧಾನಪರಿಷತ್ ಮಾಜಿ ಸದಸ್ಯ ಮುಹಮ್ಮದ್ ಮಸೂದ್ ಮಾತನಾಡಿ, ಟಿಪ್ಪು ಜಯಂತಿ ಕಾರ್ಯಕ್ರಮದಂದು ಯಾವುದೇ ರ‍್ಯಾಲಿ, ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ನಗರ ಡಿಸಿಪಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಹಾಸ ರೈ, ಯೆನಪೋಯ ಅಬ್ದುಲ್ಲಾ ಕುಂಞಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English