ಖಾಸಗಿ ವೈದ್ಯರುಗಳು ನಡೆಸುತ್ತಿರುವ ಪ್ರತಿಭಟನೆ, ರೋಗಿಗಳು ನಿರಾಶ

12:20 PM, Friday, November 3rd, 2017
Share
1 Star2 Stars3 Stars4 Stars5 Stars
(5 rating, 1 votes)
Loading...

private hospitals ಮಂಗಳೂರು : ಖಾಸಗಿ ವೈದ್ಯರುಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017 ಅನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಮಂಗಳೂರು ಮತ್ತು ಉಡುಪಿ ರೋಗಿಗಳಿಗೂ ಬಲವಾಗಿ ತಟ್ಟಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಶನಿವಾರ ಬೆಳಿಗ್ಗೆ 8 ಗಂಟೆಯವರೆಗೆ ಪ್ರತಿಭಟನೆ ಇರಲಿರುವುದರಿಂದ, ಪ್ರತಿಭಟನೆ ಮತ್ತು ಪರಿಸ್ಥಿತಿಯ ಅರಿವಿರದ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಎಡತಾಕುತ್ತಲೇ ಇದ್ದಾರೆ, ಅಲ್ಲಿ ಹೊರರೋಗಿಗಳಿಗೆ ಸೇವೆ ಸಿಗದೆ ನಿರಾಶರಾಗುತ್ತಿದ್ದಾರೆ.

ಒಳರೋಗಿಗಳಿಗೆ ಮಾತ್ರ ಅವಶ್ಯಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇದರಿಂದ ರೋಗಿಗಳಿಗಳಿಗೆ ಹೊರರೋಗಿಗಳ ಘಟಕದಲ್ಲಿ ಮಾತ್ರವಲ್ಲ ತುರ್ತು ಚಿಕಿತ್ಸೆಯೂ ಲಭಿಸುತ್ತಿಲ್ಲ. ಮಂಗಳೂರಿನ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.

ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳು 24 ಗಂಟೆಗಳ ಕಾಲ ನಿರಂತರ ಸೇವೆ ಸಲ್ಲಿಸಲು ಸಿದ್ಧವಾಗಿದೆ. ಎಲ್ಲ ಸರಕಾರಿ ವೈದ್ಯರು ರಜಾ ಕ್ಯಾನ್ಸಲ್ ಮಾಡಿ ಸೇವೆಗೆ ಹಾಜರಾಗಬೇಕೆಂದು ಸರಕಾರ ಕೂಡ ಆದೇಶಿಸಿದೆ. ಉಡುಪಿಯಲ್ಲಿ ಜಿಲ್ಲೆಯ 25ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಯಿಂದ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದೆ. 700ಕ್ಕೂ ಅಧಿಕ ಅಲೋಪತಿ, ಆಯುರ್ವೇದ, ಹೋಮಿಯೋಪತಿ ವೈದ್ಯರು ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತುರ್ತುಚಿಕಿತ್ಸೆಗೆ ಅವಕಾಶ ನೀಡಲಾಗಿದ್ದು, ಹೊರರೋಗಿಗಳ ವಿಭಾಗ ಬಂದ್ ಆಗಿದೆ. ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ವೈದ್ಯರಿಗೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ನೀಡಿದ್ದಾರೆ. ಜಿಲ್ಲೆಯ 61 ಪ್ರಾಥಮಿಕ ಆರೋಗ್ಯ ಕೇಂದ್ರ, 7 ಸಮುದಾಯ ಆರೋಗ್ಯ ಕೇಂದ್ರ, 2 ತಾಲೂಕು ಆಸ್ಪತ್ರೆ, 1 ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ವ್ಯವಸ್ಥೆ ಮಾಡಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English