ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯದ ಸಂದೇಶ ಪ್ರಕಟಿಸಿದ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಅಮಾನತು ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯ ಕಾನ್ಸ್’ಟೇಬಲ್ ರಾಜ ಶಿವಪ್ಪ ಬೆಣ್ಣೆ ಅಮಾನತುಗೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಇವರು ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಮಾನಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಿದ್ದರು.
ಇದರ ವಿರುದ್ಧ ದೂರು ಕೂಡ ಸಲ್ಲಿಕೆಯಾಗಿತ್ತು. ಇದೀಗ ಅವರನ್ನು ಕೆಲಸದಿಂದ ವಜಾ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ
Click this button or press Ctrl+G to toggle between Kannada and English