ಟಿಪ್ಪು ಜಯಂತಿ ಮತ್ತು ಬಿಜೆಪಿ ವತಿಯಿಂದ ಪರಿವರ್ತನಾ ಯಾತ್ರೆಗೆ ಬಿಗು ಬಂದೋಬಸ್ತ್ 

8:46 PM, Wednesday, November 8th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

agdpಮಂಗಳೂರು : ಟಿಪ್ಪು ಜಯಂತಿ ಮತ್ತು ಬಿಜೆಪಿ ವತಿಯಿಂದ ಪರಿವರ್ತನಾ ಯಾತ್ರೆ ಏಕ ಕಾಲದಲ್ಲಿ ನಡೆಯುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ  ಶಾಂತಿ, ಸುವ್ಯವಸ್ಥೆಗಾಗಿ ಪೊಲೀಸ್ ಇಲಾಖೆ ಸಕಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ.

ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಕಮಲ್ ಪಂತ್, ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್‌ಗೆ ಸೂಚಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ  ಮಾತನಾಡಿದ ಅವರು, ಬಂದೋಬಸ್ತ್‌ಗಾಗಿ ಪೊಲೀಸ್ ಇಲಾಖೆ ಸಕಲ ಕ್ರಮ ತೆಗೆದುಕೊಂಡಿದೆ. ನಗರ ಹಾಗೂ ಜಿಲ್ಲಾ ಪೊಲೀಸ್ ಜತೆಗೆ 2 ಸಾವಿರ ಹೆಚ್ಚುವರಿ ಪೊಲೀಸ್, 13 ಕೆಎಎಸ್‌ಆರ್‌ಪಿ ತುಕಡಿ, 1 ಆರ್ ಎಎಫ್ ನಿಯೋಜಿಸಲಾಗುವುದು ಎಂದರು.

ಸಮಾಜ ಘಾತುಕ ಶಕ್ತಿಗಳ ಮೇಲೆ ಪೊಲೀಸ್ ಇಲಾಖೆ ನಿಗಾ ಇರಿಸಿದೆ ಮತ್ತು ಸಾರ್ವಜನಿಕರ ಸಹಕಾರ ಅಗತ್ಯ ಎಂದ ಅವರು, ಬಿಜೆಪಿ ವತಿಯಿಂದ ನಡೆಯುವ ಪರಿವರ್ತನಾ ಯಾತ್ರೆಗೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದ್ದು, ಕಾನೂನಿಗೆ ವಿರುದ್ಧವಾಗಿ ನಡೆಯುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಟಿಪ್ಪುಜಯಂತಿ ಸರಕಾರಿ ಕಾರ್ಯಕ್ರಮವಾಗಿದ್ದು, ಇದರ ವಿರುದ್ಧ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದರು.

ಪಶ್ಚಿಮ ಮಲಯ ಪೊಲೀಸ್ ಮಹಾನಿರ್ದೇಶಕ ಹೇಮಂತ್ ನಿಂಬಾಳ್ಕರ್, ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಎಸ್ಪಿ ಸುಧೀರ್ ರೆಡ್ಡಿ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English