ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಆಯ್ಕೆ

4:25 PM, Friday, November 10th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

alvasಮೂಡುಬಿದಿರೆ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯ ವಿವಿಧ ಕೋರ್ಸ್‌ಗಳನ್ನು ನಡೆಸಲು ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಆಯ್ಕೆಯಾಗಿದೆ.

300 ಸೀಟ್‌ಗಳನ್ನು ಈ ಕೋರ್ಸ್ ಗಳಿಗೆ ನಿಗದಿಪಡಿಸಲಾಗಿದೆ. ಸಿ.ಎನ್.ಸಿ ಆಪರೇಟರ್ , ತಾಂತ್ರಿಕ ಐಟಿ ಸಂಯೋಜಕ , ಟೆಕ್ನಿಷಿಯನ್, ಫಿಟ್ಟರ್ ಮತ್ತಿತರ ವೃತ್ತಿಪರ ಕೋರ್ಸ್‌ಗಳನ್ನು ನಡೆಸಬಹುದಾಗಿದೆ. ವಿದ್ಯಾರ್ಥಿಗಳಲ್ಲಿ ಮತ್ತು ಪ್ರಸಕ್ತ ಉದ್ಯೋಗಸ್ಥರಿಗೆ ಅಗತ್ಯ ತರಬೇತಿ ಮತ್ತು ಆರ್ಥಿಕ ಸಹಾಯವನ್ನು ಒದಗಿಸಿ ಕೌಶಲ್ಯಾಭಿವೃದ್ಧಿ ಮಾಡುವುದೇ ಈ ಯೋಜನೆಯ ಪ್ರಮುಖ ಉದ್ದೇಶ ಎಂದು ಸಂಯೋಜನಾಧಿಕಾರಿ ಪ್ರೊ. ಹರೀಶ್ ಕುಂದರ್ ಮಾಹಿತಿ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English