ಪುತ್ತೂರು: ಕಿಲ್ಲೆ ಮೈದಾನದಲ್ಲಿ ಪರಿವರ್ತನಾ ಯಾತ್ರೆ ಕಾರ್ಯಕ್ರಮ

12:16 PM, Saturday, November 11th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

parivarthana yathre ಮಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್‌‌‌ರನ್ನು ತಕ್ಷಣ ಬಂಧಿಸಿ ಜೈಲಿಗೆ ಅಟ್ಟಬೇಕು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನ, ಮರ್ಯಾದೆ ಇದ್ದರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಗ್ರಹಿಸಿದರು.

ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಸಂಜೆ ನಡೆದ ಪರಿವರ್ತನಾ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅತ್ಯಾಚಾರ ಪ್ರಕರಣದ ಆರೋಪಿ ವೇಣುಗೋಪಾಲ್ ಅವರನ್ನು ಲೋಕಸಭಾ ಸದಸ್ಯರಾಗಿ ಮತ್ತು ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಮುಂದುವರಿಸುತ್ತೀರಾ ಎಂಬ ನಮ್ಮ ಪ್ರಶ್ನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ಖಜಾನೆ ಲೂಟಿ ಮಾಡಿದ್ದಾರೆ. ಕಮಿಷನ್ ಪಡೆದುಕೊಂಡು ಟೆಂಡರ್ ನೀಡುವ ಕೆಲಸ ನಡೆಯುತ್ತಿದೆ. ರಾಜ್ಯದ ಖಜಾನೆ ಖಾಲಿಯಾಗಿದೆ. ಬೆಂಗಳೂರಿನ ಬಿಬಿಎಂಪಿ ಸೈಟ್‌‌ಗಳನ್ನು ಒತ್ತೆಯಿಟ್ಟು ಸಾಲ ಪಡೆಯುವ ದುಸ್ಥಿತಿ ಮುಖ್ಯಮಂತ್ರಿಗೆ ಬಂದಿದೆ. ಅಲ್ಲದೆ ಸಿದ್ದರಾಮಯ್ಯ ಮಹಾನ್ ಸುಳ್ಳುಗಾರ. ವಿಧಾನಸೌಧವನ್ನು ಒತ್ತೆ ಇಟ್ಟಾದರೂ ಅಧಿಕಾರ ಚಲಾಯಿಸುತ್ತೇನೆ ಎನ್ನುವ ಮುಖ್ಯಮಂತ್ರಿ ರಾಜ್ಯದಲ್ಲಿರುವುದು ನಮ್ಮ ದೌರ್ಭಾಗ್ಯ ಎಂದರು.

parivarthana yathre ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಪಾರ್ಲಿಮೆಂಟ್‌‌ನಲ್ಲಿ ಪಾಸ್‌ ಆದ ಅನುದಾನದ ಬಿಲ್‌‌ನ್ನು ತಡೆ ಹಿಡಿದು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ ಸಿದ್ದರಾಮಯ್ಯ ಹಣ ಕೊಳ್ಳೆ ಹೊಡೆಯುವುದರಲ್ಲಿ ಚಾಂಪಿಯನ್ ಎಂದು ಲೇವಡಿ ಮಾಡಿದರು. ಕೇಂದ್ರ ಸರ್ಕಾರ ನೀಡಿದ ಅನುದಾನದ ಅನ್ನಭಾಗ್ಯದ ಅಕ್ಕಿಯನ್ನು ಪಶು-ಪಕ್ಷಿಗಳು ತಿನ್ನುವುದಿಲ್ಲ. ಅನ್ನಭಾಗ್ಯದ ಆಹಾರಗಳು ಗೋದಾಮಿನಲ್ಲಿ ಕೊಳೆಯುತ್ತಿದೆ ಎಂದು ಆರೋಪಿಸಿದ ಅವರು, ಸರ್ಕಾರ ಸತ್ತಿದೆಯೋ ಎಂದು ಪ್ರಶ್ನಿಸಿದರು.

ಬಿಜೆಪಿ ಪರಿವರ್ತನಾ ಯಾತ್ರೆ ಬಗ್ಗೆ ಅನಗತ್ಯ ಟೀಕೆ ಮಾಡಲು ಆರಂಭಿಸಿರುವ ಸಿದ್ದರಾಮಯ್ಯ ನಮ್ಮ ಯಾತ್ರೆಯನ್ನು ಹಿಂಬಾಲಿಸಿ ಸರ್ಕಾರಿ ಪ್ರವಾಸ ಕೈಗೊಳ್ಳಲು ಹೊರಟಿದ್ದಾರೆ. ಆದರೆ ಕಾಂಗ್ರೆಸ್ ಅಧ್ಯಕ್ಷ ಪರಮೇಶ್ವರ್ ಈ ಸರ್ಕಾರಿ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂಬುವುದು ಜಗಜ್ಜಾಹೀರಾಗಿದೆ ಎಂದರು.

ನನ್ನನ್ನು ಕಂಡರೆ ಪ್ರಧಾನಿ ಮೋದಿ ಹೆದರಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಎಂತಹ ನಗೆಪಾಟಲು ಮಾತಿದು. ಬಚ್ಚಾ ಇದ್ದೀಯಾ ನೀನು.. ಮೀನು ತಿಂದು ದೇವಳಕ್ಕೆ ಹೋಗುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದವರು ಸಿದ್ದರಾಮಯ್ಯ. ಇವರನ್ನು ರಾಜ್ಯಾದ್ಯಂತ ಓಡಾಡಲು ಜನತೆ ಬಿಡುತ್ತೀರಾ ಎಂದು ಪ್ರಶ್ನಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English