ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಪ್ರಮೋದ್ ;ದಂಡ ಪಾವತಿ

3:24 PM, Saturday, November 11th, 2017
Share
1 Star2 Stars3 Stars4 Stars5 Stars
(No Ratings Yet)
Loading...

pramod madhvaraj ಉಡುಪಿ: ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡಿ ಕರ್ಜೆಯ ಕೆಂಜೂರು ಎಂಬಲ್ಲಿ ನ. 9ರಂದು  ವಿವಾದಕ್ಕೆ ಕಾರಣರಾಗಿದ್ದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಶುಕ್ರವಾರ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ 100 ರೂ. ದಂಡ ಪಾವತಿಸಿದ್ದಾರೆ.

ಕೆಂಜೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮದ ನಿಗದಿತ ಅವಧಿಗಿಂತ ಮೊದಲೇ ತೆರಳಿದ್ದ ಸಚಿವರು ಬಿಡುವಿನ ಸಮಯದಲ್ಲಿ ಅಲ್ಲೇ ಇದ್ದ ಬೈಕಿನಲ್ಲಿ ಹೆಲ್ಮೆಟ್ ಧರಿಸದೆ ಜಾಲಿ ರೈಡ್ ಮಾಡಿದರು. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾಕಷ್ಟು ಟೀಕೆಗಳು ವ್ಯಕ್ತ ವಾಗಿದ್ದವು. ಈ ವಿರೋಧದ ಹಿನ್ನೆಲೆಯಲ್ಲಿ ಅವರು ದಂಡವನ್ನು ಪಾವತಿಸಿದ್ದಾರೆ.

‘ಸಚಿವ ಪ್ರಮೋದ್ ಮಧ್ವರಾಜ್ ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡಿ ಕಾನೂನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ನ.10ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ 100 ರೂ. ದಂಡವನ್ನು ಪಾವತಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷ ಡಾ.ಸಂಜೀವ ಎಂ.ಪಾಟೀಲ್ ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English