ಕುಕ್ಕೆಚಂಪಾಷಷ್ಠಿ ಜಾತ್ರೋತ್ಸವ: ಎಡೆಸ್ನಾನ

6:01 PM, Friday, November 24th, 2017
Share
1 Star2 Stars3 Stars4 Stars5 Stars
(4 rating, 1 votes)
Loading...

edesnanaಸುಬ್ರಹಣ್ಯ: ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಚೌತಿಯ ದಿನವಾದ ಬುಧವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ೯೪ಮಂದಿ ಎಡೆಸ್ನಾನ ಸೇವೆಗೈದರು. ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಚೌತಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು.

ಧಾರ್ಮಿಕ ದತ್ತಿ ಇಲಾಖೆಯ ಶೈವಾಗಮ ಪಂಡಿತ ವೇದಮೂರ್ತಿ ಡಾ.ಎಚ್.ರಾಜ್‌ಗೋಪಾಲ್ ಮತ್ತು ಆಗಮ ಪಂಡಿತ ಪ್ರೊ.ಶಿವಕುಮಾರ್ ಅವರು ಎಡೆಸ್ನಾನದ ಕುರಿತು ಮಾರ್ಗದರ್ಶನ ನೀಡಿದರು. ಅದರಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಧ್ಯಾಹ್ನ ಮಹಾಪೂಜೆ ಬಳಿಕ ದೇವಳದ ಹೊರಾಂಗಣದ ಸುತ್ತಲೂ ೪೩೨ ಬಾಳೆಎಲೆಗಳನ್ನು ಹಾಕಿ ಅದರ ಮೇಲೆ ದೇವರ ನೈವೇಧ್ಯಗಳನ್ನು ಬಳಸಲಾಯಿತು. ಬಳಿಕ ದೇವಳದ ಗೋವುಗಳು ಆ ಎಲೆಗಳಲ್ಲಿದ್ದ ಅನ್ನಪ್ರಸಾದವನ್ನು ತಿಂದವು. ಹಸುಗಳು ತಿಂದ ಅನ್ನಪ್ರಸಾದದ ಮೇಲೆ ಉರುಳು ಸೇವೆ ನಡೆಯಿತು. ಬಳಿಕ ದೇವಳದೆದುರಿನ ದರ್ಪಣತೀರ್ಥ ನದಿಯಲ್ಲಿ ಮಿಂದು ನಿಂತಿದ್ದ ಎಲ್ಲಾ ಭಕ್ತರು ಉರುಳು ಸೇವೆ ಕೈಗೊಂಡರು.

ಎಡೆಸ್ನಾನ ಸಂದರ್ಭ ಕ್ಷೇತ್ರದಲ್ಲಿ ಬಂದೋಬಸ್ತ್ ವಹಿಸಲಾಗಿತ್ತು. ಈ ಸಂದರ್ಭದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ದೇವಳದ ಕಾರ‍್ಯನಿರ್ವಾಹಣಾಧಿಕಾರಿ ರವೀಂದ್ರ ಎಂ.ಎಚ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೃಷ್ಣಮೂರ್ತಿ ಭಟ್, ರಾಜೀವಿ ಆರ್.ರೈ, ಮಾಧವ.ಡಿ, ಮಾಸ್ಟರ್ ಪ್ಲಾನ್ ಸದಸ್ಯರಾದ ಶಿವರಾಮ ರೈ, ಸುಧೀರ್‌ಕುಮಾರ್ ಶೆಟ್ಟಿ, ಶ್ರೀ ದೇವಳದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ದೇವಳದ ಹೆಬ್ಬಾರ್ ಷಣ್ಮುಖ ಉಪಾರ್ಣ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English