ಮಂಗಳೂರಿನಲ್ಲಿ ಸರ್ಕಾರಿ ಡಿಜಿಟಲ್ ಫಲಕಕ್ಕೆ ಸಚಿವ ರಮಾನಾಥ ರೈ ಚಾಲನೆ

7:06 PM, Wednesday, November 29th, 2017
Share
1 Star2 Stars3 Stars4 Stars5 Stars
(No Ratings Yet)
Loading...

Vartha-Elakeಮಂಗಳೂರು : ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮತ್ತು ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ಥಾಪಿಸಿರುವ ಡಿಜಿಟಲ್ ಎಲ್‍ಇಡಿ ಫಲಕವನ್ನು ಸಚಿವ ಬಿ. ರಮಾನಾಥ ರೈ ಮಂಗಳವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜನಸಾಮಾನ್ಯರು ಈ ಯೋಜನೆಗಳ ಪ್ರಯೋಜನ ಪಡೆಯಲು ಅರಿವು ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಾರ್ತಾ ಇಲಾಖೆಯು ಆಧುನಿಕ ತಂತ್ರಜ್ಞಾನದ ಎಲ್‍ಇಡಿ ಡಿಜಿಟಲ್ ಫಲಕವನ್ನು ಪ್ರಮುಖ ಜನಸಂದಣಿ ಪ್ರದೇಶದಲ್ಲಿ ಸ್ಥಾಪಿಸಿರುವುದು ಶ್ಲಾಘನೀಯ ಎಂದರು.

ಈ ಎಲ್‍ಇಡಿ ಫಲಕದಲ್ಲಿ ಸರ್ಕಾರದ ಯೋಜನೆಗಳೊಂದಿಗೆ ಆರೋಗ್ಯ, ಭದ್ರತೆ ಸೇರಿದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನೂ ಪ್ರಸಾರ ಮಾಡುವಂತೆ ಸಚಿವರು ಸೂಚಿಸಿದರು.

ವಾರ್ತಾ ಇಲಾಖೆಯು ಕರ್ನಾಟಕದ 10 ಜಿಲ್ಲಾ ಕೇಂದ್ರಗಳಲ್ಲಿ ಈ ಡಿಜಿಟಲ್ ಫಲಕ ಅಳವಡಿಸಿದೆ. ಈ ಡಿಜಿಟಲ್ ಫಲಕ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English