ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ನ್ನು ಸ್ಥಳೀಯ ಸಂಸದರು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ.ಸೋಜ ಆರೋಪಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಂಗಳೂರು-ಕಾರ್ಕಳ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿಯಾಗಿದ್ದ ಈ ರಸ್ತೆಯನ್ನು 20 ವರ್ಷಗಳ ಹಿಂದೆಯೇ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ರಾ.ಹೆ. ಪ್ರಾಧಿಕಾರವು ಇದಕ್ಕೆ ಸಂಬಂಧಿಸಿದಂತೆ ಬೋರ್ಡ್ ಬದಲಾಯಿಸಿದ್ದು ಬಿಟ್ಟರೆ ಬೇರೇನೂ ಮಾಡಿಲ್ಲ. ಈ ಹೆದ್ದಾರಿಯಲ್ಲಿ ಸಿಗುವ ಗುರುಪುರ ಸೇತುವೆಯು ಶಿಥಿಲಾವಸ್ಥೆಗೆ ತಲುಪಿದೆ. ವಾಹನಗಳ ಓಡಾಟಕ್ಕೆ ಇದು ಅಯೋಗ್ಯ ಎಂದು ಎನ್ಐಟಿಕೆ ತಜ್ಞರು ಕೂಡ ವರದಿ ನೀಡಿದ್ದಾರೆ. ಆದರೂ ಈ ಹೆದ್ದಾರಿಯ ಅಭಿವೃದ್ಧಿಗೆ ಸಂಸದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.
ಹೆದ್ದಾರಿಯನ್ನು ಚತುಷ್ಪಥಗೊಳಿಸಲು ಕನಿಷ್ಠ 2 ವರ್ಷ ಬೇಕಾಗಿದೆ. ಆವರೆಗೆ ಇದರ ದುರಸ್ತಿಯಾಗಬೇಕಿದೆ. ರಾ.ಹೆ. ಪ್ರಾಧಿಕಾರವು ಇದರ ದುರಸ್ತಿಗೆ 17.50 ಕೋ. ಪ್ರಸ್ತಾಪವನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿದೆ. ಸಂಸದರು ಅದರ ಬಿಡುಗಡೆಗೆ ಇಚ್ಛಾಶಕ್ತಿ ವ್ಯಕ್ತಪಡಿಸುತ್ತಿಲ್ಲ. ಕೇವಲ ಭಾಷಣದಿಂದ ಮಾತ್ರ ಹೊಟ್ಟೆ ತುಂಬುತ್ತದೆ ಎಂದು ಸಂಸದರು ಭಾವಿಸಿದಂತಿದೆ ಎಂದು ಲೇವಡಿ ಮಾಡಿದರು.
Click this button or press Ctrl+G to toggle between Kannada and English