ಡಿ.10ರಂದು ತುಮಕೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ

9:08 PM, Thursday, December 7th, 2017
Share
1 Star2 Stars3 Stars4 Stars5 Stars
(No Ratings Yet)
Loading...

jdsಮಂಗಳೂರು :  ತುಮಕೂರಿನ ಸರಕಾರಿ ಶಾಲಾ ಮೈದಾನದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಡಿ.10ರಂದು ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಎಂ.ಕೆ. ಅಬ್ದುಲ್ ಖಾದರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ಸುಮಾರು ಮೂರು ಲಕ್ಷ ಜೆಡಿಎಸ್ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳಿಂದ ಸುಮಾರು 10 ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ತಕ್ಕ ಪಾಠವನ್ನು ಕಲಿಸಲಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English