ನವದೆಹಲಿ: ಗುಜರಾತ್ ಚುನಾವಣಾ ಪ್ರಚಾರದ ವೇಳೆ ಆರೋಪ-ಪ್ರತ್ಯಾರೋಪಗಳನ್ನು ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾಗಿ ಕೈಕುಲುಕಿ ಮಾತನಾಡಿದರು.
2001ರ ಸಂಸತ್ ದಾಳಿಯ ವರ್ಷಾಚರಣೆ ಹಿನ್ನೆಲೆಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಲು ಆಗಮಿಸಿದ್ದ ವೇಳೆ ಹಾಲಿ ಹಾಗೂ ಮಾಜಿ ಪ್ರಧಾನಿಗಳ ಸಮಾಗಮ ಆಗಿದೆ.
ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಲು ಸಂಸತ್ ಕಟ್ಟಡ ಪ್ರವೇಶಿಸುವ ಮುನ್ನ ಉಭಯ ನಾಯಕರು ಪರಸ್ಪರ ಭೇಟಿಯಾಗಿ ಕೈಕುಲುಕಿ ಕುಶಲೋಪರಿ ವಿಚಾರಿಸಿದರು.
ಗುಜರಾತ್ ಚುನಾವಣಾ ಪ್ರಚಾರದ ವೇಳೆ ಮನಮೋಹನ್ ಸಿಂಗ್ ವಿರುದ್ಧ ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದರು. ಗುಜರಾತ್ ಚುನಾವಣೆ ಸಂಬಂಧ ಮನಮೋಹನ್ ಸಿಂಗ್ ಅವರು ಪಾಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ ಎಂದು ಮೋದಿ ದೂರಿದ್ದರು.
ಇದು ಭಾರಿ ಚರ್ಚೆಗೆ ಗ್ರಾಸವಾಗಿ ಉಭಯ ಪಕ್ಷಗಳ ನಾಯಕರು ಮಧ್ಯೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಮೋದಿ ಅವರ ಆರೋಪವನ್ನು ಕಾಂಗ್ರೆಸ್ ಅಲ್ಲಗಳೆದಿತ್ತು. ಜೊತೆಗೆ ಈ ಸಂಬಂಧ ಮೋದಿ ಕ್ಷಮೆ ಕೋರಬೇಕೆಂದು ಮನಮೋಹನ್ ಸಿಂಗ್ ಒತ್ತಾಯಿಸಿದ್ದರು.
ಈ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಮೋದಿ, ಮನಮೋಹನ್ ಸಿಂಗ್ ಭೇಟಿಯಾಗಿ ಮಾತನಾಡಿದ್ದು ವಿಶೇಷವಾಗಿದೆ.
Click this button or press Ctrl+G to toggle between Kannada and English