ಗುಜರಾತ್ ಚುನಾವಣೆ ಫಲಿತಾಂಶದಿಂದ ದೇಶದಲ್ಲಿ ರಾಜಕೀಯ ಬದಲಾವಣೆ: ಯು.ಟಿ. ಖಾದರ್

4:11 PM, Monday, December 18th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

u-t-kaderಮಂಗಳೂರು: ಗುಜರಾತ್ ಚುನಾವಣೆ ಫಲಿತಾಂಶದಿಂದ ದೇಶದಲ್ಲಿ ರಾಜಕೀಯ ಬದಲಾವಣೆಯ ಬಿರುಗಾಳಿ ಬೀಸಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಸತ್ಯಮೇವ ಜಯತೆ ಎಂಬಂತೆ ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂಬುದನ್ನು ಗುಜರಾತ್ ಫಲಿತಾಂಶ ತೋರಿಸಿ ಕೊಟ್ಟಿದೆ. 22 ವರ್ಷಗಳಿಂದ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದರೂ, 30ಕ್ಕೂ ಅಧಿಕ ಸಾರ್ವಜನಿಕ ರ್ಯಾಲಿ ನಡೆಸಿದರೂ ಕಾಂಗ್ರೆಸ್ ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ಪಡೆಯುವುದನ್ನು ಬಿಜೆಪಿಗೆ ತಪ್ಪಿಸಲಾಗಲಿಲ್ಲ. ಜನ ಯಾವುದೇ ತಂತ್ರಗಾರಿಕೆಗೆ ಮಾರು ಹೋಗಿ ಮತ ಹಾಕುವುದಿಲ್ಲ ಎಂಬುದು ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಏನೇ ಬಂದರೂ ಜನ ನಂಬುವುದಿಲ್ಲ ಎಂದು ಅವರು ಹೇಳಿದರು.

ಹಿಮಾಲಯ ಫಲಿತಾಂಶ ಜನರ ತೀರ್ಮಾನ ಅದನ್ನು ನಾವು ಸ್ವಾಗತಿಸುತ್ತೇವೆ. ರಾಹುಲ್ ಅಧಿಕಾರ ವಹಿಸಿಕೊಂಡ ಬಳಿಕ ದೇವರು ಮತ್ತು ಜನರ ಆಶೀರ್ವದ ಆರಂಭದಿಂದಲೇ ಅವರಿಗೆ ದೊರಕಿದೆ ಮುಂದೆ ಅವರು ದೇಶದ ಪ್ರಧಾನಿಯಾಗಿ ಆಯ್ಕೆಯಾಗಲಿದ್ದಾರೆ ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈ ಸಂದರ್ಭ ಮಮತ ಗಟ್ಟಿ ಹಾಗು ಇತರರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English