ಬಿಜೆಪಿ ಜಯಭೇರಿ: ಮಾಜಿ ಪ್ರಧಾನಿ ದೇವೇಗೌಡ ಪ್ರತಿಕ್ರಿಯೆ

5:32 PM, Monday, December 18th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

devegoudaಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಬಿಜೆಪಿಯನ್ನು ಅಭಿನಂದಿಸಿದ್ದಾರೆ.

ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದ ದೇವೇಗೌಡ್ರು, ನನ್ನ ರಾಜಕೀಯ ಜೀವನದಲ್ಲಿ ಇದುವರೆಗೆ ಹದಿನಾಲ್ಕು ಚುನಾವಣೆಯನ್ನು ನೋಡಿದ್ದೇನೆ. ಆದರೆ ಗುಜರಾತ್ ಚುನಾವಣೆಯಷ್ಟು ಕೀಳು ಮಟ್ಟದ ಪ್ರಚಾರವನ್ನು ಇದುವರೆಗೂ ನೋಡಿರಲಿಲ್ಲ ಎಂದು ಗೌಡ್ರು ವಿಷಾದ ವ್ಯಕ್ತ ಪಡಿಸಿದ್ದಾರೆ.

ಕರ್ನಾಟಕದ ಸ್ಥಿತಿಯೇ ಬೇರೆ, ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯೇ ಬೇರೆ, ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ದೇವೇಗೌಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English