[1]ನವದೆಹಲಿ: ಬಹು ನಿರೀಕ್ಷಿತ ಗುಜರಾತ್-ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ದಾಖಲಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎರಡೂ ರಾಜ್ಯದ ಜನರಿಗೆ ಧನ್ಯವಾದ ಹೇಳಿದ್ದಾರೆ.
ನವದೆಹಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಇದು ವಂಶವಾದ, ಜಾತೀವಾದದ ವಿರುದ್ಧದ ಗೆಲುವು. ದೇಶದ ಜನರು ಅಭಿವೃದ್ಧಿಗೆ ಮಣೆ ಹಾಕಿದ್ದಾರೆ.
ಬಿಜೆಪಿ ಗೆಲುವು ಪ್ರಜಾಸತ್ತಾತ್ಮಕ ಗೆಲುವು. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.