- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ

modi [1]ಮಂಗಳೂರು: ಕಡಲ ನಗರಿ ಮಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ .ಲಕ್ಷದ್ವೀಪಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಇಂದು ಮಂಗಳೂರಿನಲ್ಲಿಯೇ ತಂಗಲಿದ್ದಾರೆ. ಗುಜರಾತ್ ಹಾಗು ಹಿಮಾಚಲ ಪ್ರದೇಶ ಚುನಾವಣೆಯ ಗೆಲುವಿನ ವಿಜಯೋತ್ಸವದ ನಡುವೆ ಇಂದು ಪ್ರಧಾನಿ ಮೋದಿ ಮಂಗಳೂರಿನಲ್ಲಿ ತಂಗುವ ಹಿನ್ನೆಲೆಯಲ್ಲಿ ಕರಾವಳಿಯ ಕೇಸರಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.

ಡಿ. 18ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ದಿನದಂದೇ ಮೋದಿ ಕಡಲ ನಗರಿಗೆ ಆಗಮಿಸಿ ವಾಸ್ತವ್ಯ ಹೂಡಲಿರುವುದರಿಂದ ದೊಡ್ಡ ಮಟ್ಟದ ಸ್ವಾಗತ ಕೊರಲು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಿದ್ದತೆ ನಡೆಸಿದೆ. ಒಖ್ಹಿ ಚಂಡಮಾರುತದಿಂದ ತತ್ತರಿಸುವ ಲಕ್ಷದ್ವೀಪದ ಪ್ರದೇಶಗಳ ವೀಕ್ಷಣೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಹಿನ್ನಲೆಯಲ್ಲಿ ಪ್ರಧಾನಿ ಲಕ್ಷದ್ವೀಪಕ್ಕೆ ನಾಳೆ ಡಿಸೆಂಬರ್ 19ರಂದು ಭೇಟಿ ನೀಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 11.30 ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ರಾತ್ರಿ ಮಂಗಳೂರಿನಲ್ಲಿಯೇ ತಂಗಲಿದ್ದಾರೆ.

ಪ್ರಧಾನಿ ಅವರು ತಂಗಲು ನಗರದ ಕದ್ರಿಯ ಸರ್ಕ್ಯೂಟ್ ಹೌಸ್ ನ್ನು ಸಿದ್ದಪಡಿಸಲಾಗಿದೆ .ಪ್ರಧಾನಿ ಅವರು ರಾತ್ರಿ ವಾಸ್ತವ್ಯಕ್ಕಾಗಿ ನಗರದ ಮೂರು ಸ್ಥಳಗಳನ್ನು ಗೊತ್ತುಪಡಿಸಲಾಗಿತ್ತು ಆದರೆ ಭಧ್ರತೆಯ ದೃಷ್ಟಿಯಿಂದ ಸರ್ಕ್ಯೂಟ್ ಹೌಸ್ ನ್ನು ಅಂತಿಮ ಗೊಳಿಸುವ ಸಾಧ್ಯತೆ ಇದೆ. ಸರ್ಕ್ಯೂಟ್ ಹೌಸ್ ನಲ್ಲಿ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಪ್ರಧಾನಿ ಮೋದಿ ಮಂಗಳೂರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸ್ವಾಗತಿಸಲು ಬಿಜೆಪಿ ಮುಖಂಡರು ಹಾಗು ಕಾರ್ಯಕರ್ತರು ಸಜ್ಜಾಗಿದ್ದಾರೆ.

ಬಿಜೆಪಿ ಗೆಲುವು: ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ಮೋದಿ ವಿಮಾನ ನಿಲ್ದಾಣದಿಂದ ಸರ್ಕ್ಯೂಟ್ ಹೌಸ್ ವರೆಗೆ ದಾರಿ ಯುದ್ದಕ್ಕೂ ಜಿಜೆಪಿ ಬಾವುಟ , ಹಾಗು ಬಂಟಿಂಗ್ಸ್ ಗಳು ರಾರಾಜಿಸುತ್ತಿವೆ. ಮೋದಿ ಅವರೊಂದಿಗೆ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಗೆಲುವಿನ ಸಂಭ್ರಮಾಚರಣೆ ನಡೆಸಲು ಮಂಗಳೂರಿನಲ್ಲಿ ಬಿಜೆಪಿ ಮುಖಂಡರು ಹಾಗು ಕಾರ್ಯಕರ್ತರು ಸಿದ್ದತೆ ನಡೆಸಿದ್ದಾರೆ. ನಾಳೆ ಡಿಸೆಂಬರ್ 19 ರಂದು ಬೆಳಗ್ಗೆ 6:30 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ವಾಯು ಪಡೆಯ ಹೆಲಿಕಾಫ್ಟರ್ ಮೂಲಕ ಮೋದಿ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಲಿದ್ದಾರೆ.