ಬೆಂಗಳೂರು: ‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎನ್ನುವ ಸುದ್ದಿ ಸೋಮಾವಾರ ಸಂಜೆಯಿಂದ ವಾಟ್ಸಪ್ ಸೇರಿದಂತೆ ಸಾಮಾಜಿಕ ತಾಣಗಳಲ್ಲಿ ಸುಳ್ಳು ವೈರಲ್ ಆಗಿ ಹರಿದಾಡಿದೆ.
ಈ ಬಗ್ಗೆ ಮಂಗಳವಾರ ಯಡಿಯೂರಪ್ಪ ಅವರ ಬಳಿ ಸುದ್ದಿಗಾರರು ಪ್ರಶ್ನಿಸಿದಾಗ’ ಏನ್ರಿ ನೀವು ಬರ್ದಿದ್ದೀರಾ… ಪ್ರತ್ಯಕ್ಷ ನೋಡ್ತಾ ಇದ್ದೀರಲ್ಲಾ’ ಎಂದರು.
‘ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ನೋಡುತ್ತಿದ್ದ ವೇಳೆ ಬಿಎಸ್‌ವೈ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ’ ಎಂದು ಫೋಟೋ ಸಮೇತ ಸುಳ್ಳು ಸುದ್ದಿ ವೈರಲ್ ಆಗಿತ್ತು.
Click this button or press Ctrl+G to toggle between Kannada and English