ಮಂಗಳೂರು: ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯುವ ‘ಕರಾವಳಿ ಉತ್ಸವ 2017’ ಅನ್ನು ಬಹುಭಾಷಾ ನಟ ಪ್ರಕಾಶ್ ರೈ ಉದ್ಘಾಟಿಸಲಿದ್ದಾರೆ.
ಪ್ರಕಾಶ್ ರೈ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಸ್ಪಷ್ಟಪಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ‘ಕರಾವಳಿ ಉತ್ಸವ ಯಶಸ್ವಿಯಾಗಿ ನಡೆಯುವಂತೆ ಸಕಲ ತಯಾರಿಗಳೂ ನಡೆಯುತ್ತಿವೆ’ ಎಂದರು.
ಕರಾವಳಿ ಉತ್ಸವದ ಅಂಗವಾಗಿ ಹತ್ತು ದಿನಗಳ ಕಾಲ ಕರಾವಳಿ ಉತ್ಸವ ಮೈದಾನ ಮತ್ತು ಕದ್ರಿ ಉದ್ಯಾನದ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಡಿಸೆಂಬರ್ 29ರಿಂದ 31ರವರೆಗೆ ಪಣಂಬೂರು ಕಡಲ ತೀರದಲ್ಲಿ ‘ಬೀಚ್ ಉತ್ಸವ’ ನಡೆಯಲಿದೆ ಎಂದರು.
ಪ್ರಧಾನಿ ಮೋದಿ ಅವರ ವಿರುದ್ಧ ಟ್ವಿಟರ್‌ನಲ್ಲಿ ಜಸ್ಟ್ ಆಸ್ಕಿಂಗ್ ಆಂದೋಲನ ನಡೆಸುತ್ತಿರುವ ಪ್ರಕಾಶ್ ರೈ ವಿರುದ್ಧ ಕರಾವಳಿ ಜಿಲ್ಲೆಯ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರ ಅಸಮಾಧಾನ ಇದೆ ಹೀಗಿದ್ದರೂ ರಮಾನಾಥ ರೈ ಅವರು ಉದ್ಘಾಟನೆಗೆ ಪ್ರಕಾಶ್ ರೈ ಅವರನ್ನು ಕರೆದಿರುವುದು ವಿವಾದಕ್ಕೆ ಎಡೆ ಮಾಡುವ ಸಾಧ್ಯತೆ ಇದೆ.
Click this button or press Ctrl+G to toggle between Kannada and English