ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಮಾಡಿದೆ.
ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ನೇತೃತ್ವದ ನಿಯೋಗ ಬುಧವಾರ ರಾಜ್ಯಪಾಲರಿಗೆ ಈ ಕುರಿತು ಮನವಿ ಮಾಡಿದೆ. ಭೂಪಸಂದ್ರ ಅಕ್ರಮ ಡಿನೋಟಿಫಿಕೇಶನ್ ಆರೋಪದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲಾಗಿದೆ.
ಯಡಿಯೂರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭವೃದ್ಧಿ ಸಚಿವ ಕೆ.ಜೆ.ಜಾರ್ಜ್, ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ ವಿರುದ್ಧ ದೂರು ಸಲ್ಲಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಬಿ.ಜೆ.ಪುಟ್ಟಸ್ವಾಮಿ ಅವರು, ‘ಭೂಪಸಂದ್ರದಲ್ಲಿ ನಡೆದ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಎಸಿಬಿಗೂ ದೂರು ಕೊಟ್ಟಿದ್ದೇವೆ’ ಎಂದು ಹೇಳಿದರು.
ಬಿಎಸ್‌ವೈ ವಿರುದ್ಧ ದಾಖಲೆ ಬಿಡುಗಡೆ, ಕೆಜೆ ಜಾರ್ಜ್ ಬಾಂಬ್! ‘ಎಸಿಬಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಗೊಂಬೆಯಾಗಿದೆ. ಯಾವುದೇ ಮಾಹಿತಿಯನ್ನು ಆರ್‌ಟಿಐ ಯಡಿ ಕೇಳಿದರೂ ನೀಡುತ್ತಿಲ್ಲ. ಪ್ರಕರಣವನ್ನು ಮುಚ್ಚಿ ಹಾಕಲಾಗುತ್ತಿದೆ’ ಎಂದು ಆರೋಪಿಸಿದರು. ‘ಸಿದ್ದರಾಮಯ್ಯ, ಕೆ.ಜೆ.ಜಾರ್ಜ್, ಮಹೇಂದ್ರ ಜೈನ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದೇವೆ. ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳುತ್ತೇನೆ ಎಂದು ರಾಜ್ಯಪಾಲರು
Click this button or press Ctrl+G to toggle between Kannada and English