ನವದೆಹಲಿ: ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನಿನ್ನೆ ದೆಹಲಿಯ ತಾಜ್ ಪ್ಯಾಲೇಸ್‌ನಲ್ಲಿ ಅದ್ದೂರಿ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ನವಜೋಡಿ ಬಿಂದಾಸ್ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪಂಜಾಬಿ ಸಾಂಗ್‌ಗೆ ನವಜೋಡಿ ಸಖತ್ ಡ್ಯಾನ್ಸ್ ಮಾಡಿದ್ದು, ಸದ್ಯ ಅವರ ವಿಡಿಯೋ ವೈರಲ್ ಆಗಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಭಾಗವಹಿಸಿ ನವ ದಂಪತಿಗೆ ಶುಭ ಹಾರೈಸಿದ್ದಾರೆ.
ಎರಡು ಕುಟುಂಬದ ಆಪ್ತರು, ಸ್ನೇಹಿತರು ಸೇರಿದಂತೆ 500ಕ್ಕೂ ಹೆಚ್ಚು ಜನ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ವಿರಾಟ್-ಅನುಷ್ಕಾ ಜೋಡಿ ಪಂಜಾಬಿ ಸಂಗೀತಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
Click this button or press Ctrl+G to toggle between Kannada and English