ಮೂಡುಬಿದಿರೆ: 2017-2018ರ ಪರೀಕ್ಷೆಯಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ 2014-2015 ಸಾಲಿನ ವಿದ್ಯಾರ್ಥಿಗಳು ಶೇಕಡಾ 100 ಫಲಿತಾಂಶ ದಾಖಲಿಸಿದ್ದಾರೆ.
ಹೌದು…, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ನಡೆಸಿದ 2017-2018ರ ಸ್ನಾತಕೋತ್ತರ ಪರೀಕ್ಷೆಯಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ 2014- 2015 ಸಾಲಿನ ವಿದ್ಯಾರ್ಥಿಗಳು ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಪ್ರಸೂತಿ ಮತ್ತು ಸ್ತ್ರೀರೋಗ ಸ್ನಾತಕೋತ್ತರ ವಿಭಾಗದ ಡಾ. ಶ್ರುತಿ ಲೋಧಿ ಗರಿಷ್ಠ ಅಂಕಗಳನ್ನು ಗಳಿಸಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.
ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ. ವಿನಯಚಂದ್ರ ಶೆಟ್ಟಿ ಅಭಿನಂದಿಸಿದ್ದಾರೆ.
Click this button or press Ctrl+G to toggle between Kannada and English