ಉಜಿರೆ: ಚೆನ್ನೈನಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಭಾರತ ಅಂತರ ವಿ.ವಿ. ಯುವಜನೋತ್ಸವದಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ರಂಗ ಅಧ್ಯಯನ ಕೇಂದ್ರದ ಮಾರಿಕಾಡು ನಾಟಕ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ಡಾ. ಚಂದ್ರಶೇಖರ ಕಂಬಾರ ರಚಿಸಿದ ಮಾರಿಕಾಡು ನಾಟಕ ಮೂಲತಃ ವಿಲಿಯಂ ಶೇಕ್ಸ್ಪಿಯರ್ನ ಮ್ಯಾಕ್ಬೆತ್ ನಾಟಕದ ಕನ್ನಡ ರೂಪಾಂತರವಾಗಿದೆ.
ಎಸ್.ಡಿ.ಎಂ. ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಶಿವಶಂಕರ್ ಮಾರ್ಗದರ್ಶನದಲ್ಲಿ ೧೩ ವಿದ್ಯಾರ್ಥಿಗಳ ತಂಡ ನಾಟಕ ಪ್ರದರ್ಶನ ನೀಡಿದೆ. ವಿದ್ಯಾರ್ಥಿಗಳಾದ ಅನ್ವಿತ್ ಗೌಡ, ಅಂಕಿತ್ ಆಚಾರ್ಯ, ಶಶಿಪ್ರಭಾ, ಸಂಪದ ಎಸ್. ಭಾಗವತ್, ಚೇತನಾ ಡಿ., ಪದ್ಮರೇಖಾ ಕೆ. ಭಟ್, ನಿಶಾ ಭಟ್, ಅರ್ಚನಾ, ಶಿಲ್ಪಶ್ರೀ, ಶರಣ್ ಕುಮಾರ್, ಸಿಂಧುಲಕ್ಷ್ಮೀ, ಆದಿತ್ಯಾ ಪಾತ್ರಧಾರಿಗಳಾಗಿ ಉತ್ತಮ ನಿರ್ವಹಣೆ ಮಾಡಿದ್ದಾರೆ.
Click this button or press Ctrl+G to toggle between Kannada and English