ಮಂಗಳೂರು: ಮಂಗಳೂರು ಹೊರವಲಯದ ಕಾಟಿಪಳ್ಳ ಎಂಬಲ್ಲಿ ದೀಪಕ್ ರಾವ್ ಬರ್ಬರ ಹತ್ಯೆ ನಡೆದ ಬಳಿಕ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅಹಿತಕರ ಘಟನೆಗಳು ಸಂಭವಿಸಲು ಆರಂಭವಾದ ಹಿನ್ನಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತಗೆ ಕ್ರಮಕೈಗೊಳ್ಳಲಾಗಿದೆ.
ಮಂಗಳೂರಿಗೆ ಎಡಿಜಿಪಿ ಕಮಲ್ ಪಂತ್ ದೌಡು, ಬಿಗಿ ಬಂದೋಬಸ್ತ್ ಮಂಗಳೂರು ನಗರವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35 ರಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಜನವರಿ 3 ರಾತ್ರಿ 10 ಗಂಟೆಯಿಂದ ಜನವರಿ 4 ರ ರಾತ್ರಿ 10 ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಟಿ. ಆರ್ ಸುರೇಶ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯಲ್ಲಿ ಮೆರವಣಿಗೆ ಪ್ರತಿಭಟನೆ ಜಾಥಾ, ಧರಣಿ, ಮುಷ್ಕರ ರಾಸ್ತಾ ರೋಕೋ ಸೇರಿದಂತೆ ಮುತ್ತಿಗೆಯಂತಹ ಕಾರ್ಯಕ್ರಮಗಳನ್ನು ನಗರ ದಲ್ಲಿ ನಿರ್ಬಂಧಿಸಿ ದಂತಾಗಿದೆ.
ಆದರೆ ಈ ನಡುವೆ ದೀಪಕ್ ರಾವ್ ಅವರ ಮೃತದೇಹ ವನ್ನು ಮೆರವಣಿಗೆ ಮೂಲಕ ಅಂತ್ಯಕ್ರಿಯೆಗೆ ಕೊಂಡೊಯ್ಯಲು ಹಿಂದೂ ಸಂಘಟನೆಗಳು ಹಾಗು ಬಿಜೆಪಿ ಕಾರ್ಯಕರ್ತರು ನಿರ್ದರಿಸಿದ್ದಾರೆ.
ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಈ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ನಡೆಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
Click this button or press Ctrl+G to toggle between Kannada and English