ಬಜಪೆ: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ 2009 -10ನೇ ಸಾಲಿಗೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ನೀಡುವ ಪ್ರಥಮ ಸ್ಥಾನದ ರಾಜ್ಯ ಪ್ರಶಸ್ತಿಯನ್ನು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೆ. 10ರಂದು ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.
ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ನಿರ್ದೇಶಕ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಪ್ರದಾನ ವ್ಯವಸ್ಥಾಪಕ ರತ್ನಾಕರ ಶೆಟ್ಟಿ ಆವರು ಈ ಪ್ರಶಸ್ತಿಯನ್ನು ಪಡೆದರು.
ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಪ್ರಥಮ ಸ್ಥಾನದ ರಾಜ್ಯ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರು ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ನಿರ್ದೇಶಕ ಕೆ.ಎಚ್. ಅಶ್ವಥ್ ನಾರಾಯಣ ಗೌಡ ಹಾಗೂ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರು ಹಾಗೂ ಅಧಿಕಾರಿ ವರ್ಗ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ಎಂ.ಡಿ. ನಾರಾಯಣ ಕಾಮತ್, ಡಿಜಿಎಂ ಲಕ್ಷ್ಮಣ ಕುಮಾರ್ ಮಲ್ಲೂರು ಮುಂತಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English