ದೀಪಕ್ ರಾವ್ ಹತ್ಯೆ ಹಿಂದೆ ಬಿಜೆಪಿ ಕೈವಾಡ: ಶಾಸಕ ಮೊಯ್ದಿನ್ ಬಾವಾ ಆರೋಪ

11:11 AM, Friday, January 5th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

MLA-Bavaಮಂಗಳೂರು: ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆಯ ಹಿಂದೆ ಬಿಜೆಪಿಯ ರಾಜಕೀಯ ಉದ್ದೇಶವಿದೆ ಎಂದು ಮಂಗಳೂರು ಉತ್ತರ ಶಾಸಕ ಮೊಯ್ದಿನ್ ಬಾವಾ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಯನ್ನು ಕೋರಲಾಗಿದೆ ಎಂದು ಹೇಳಿದರು.

ದೀಪಕ್ ರಾವ್ ಹತ್ಯೆ ಆರೋಪಿಗಳಾದ ಪಿಂಕಿ ನವಾಜ್‍ನ ಸಹೋದರ ಲಾದನ್ ಇಸ್ಮಾಯಿಲ್ ಹಾಗೂ ಆತನ ಅಕ್ಕನ ಗಂಡ (ಬಾವ) ಕಾಪುವಿನಲ್ಲಿ ಬಿಜೆಪಿ ಕಾರ್ಯಕರ್ತರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಈ ಹತ್ಯೆಯ ಹಿಂದೆ ಇರಬಹುದಾದ ಬಿಜೆಪಿಯ ರಾಜಕೀಯ ಕೈವಾಡದ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕಾಗಿದೆ ಎಂದು ಅವರು ಹೇಳಿದರು. ನಾನು ಶಾಸಕನಾದ ಮೇಲೆ 4 ವರ್ಷ 8 ತಿಂಗಳ ಕಾಲ ಈ ಕ್ಷೇತ್ರದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಚುನಾವಣೆ ಸಮೀಪಿಸುತ್ತಿರುವಾಗ ಏಕಾಏಕಿ ಹತ್ಯೆ ಘಟನೆ ನಡೆದಿರುವುದು ಆತಂಕ ಮೂಡಿಸಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು .

ನನ್ನ ಕ್ಷೇತ್ರದ ನಾಗರಿಕರಿಗೆ ರಕ್ಷಣೆ ನೀಡಬೇಕು. ಅದಕ್ಕಾಗಿ ಇನ್ನಷ್ಟು ಭದ್ರತೆಗೆ ಪೊಲೀಸರನ್ನು ನಿಯೋಜಿಸುವಂತೆ ಗೃಹ ಇಲಾಖೆಯನ್ನು ಕೋರಿದ್ದೇನೆ ಎಂದು ಬಾವಾ ಹೇಳಿದರು. ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್ ರಾವ್ ಕುಟುಂಬಕ್ಕೆ ನಾನು ವೈಯಕ್ತಿಕವಾಗಿ 5 ಲಕ್ಷ ಮೊತ್ತ ಪರಿಹಾರ ನೀಡುತ್ತೇನೆ.

ಅದೇ ರೀತಿ ನಿನ್ನೆ ರಾತ್ರಿ ಚೂರಿ ಇರಿತದಿಂದ ಗಾಯಗೊಂಡ ಬಷೀರ್ ಅವರಿಗೆ 2 ಲಕ್ಷ ಹಾಗೂ ಮುಬಷಿರ್‍ ಅವರಿಗೆ 50 ಸಾವಿರವನ್ನು ವೈಯಕ್ತಿಕವಾಗಿ ನೀಡುತ್ತೇನೆ. ಅಲ್ಲದೆ ಗಾಯಾಳುಗಳ ಎಲ್ಲಾ ಆಸ್ಪತ್ರೆ ವೆಚ್ಚಗಳನ್ನು ಭರಿಸುವಂತೆ ಜಿಲ್ಲಾಡಳಿತವನ್ನು ಕೋರುತ್ತೇನೆ ಎಂದು ಅವರು ಹೇಳಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English