ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲು ಅವರು ಶುಕ್ರವಾರ ಸಂಜೆ ದೀಪಕ್ ರಾವ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ದೀಪಕ್ ರಾವ್ ಕುಟುಂಬದ ದುಃಖ ದಲ್ಲಿ ಪಕ್ಷ ಭಾಗಿಯಾಗುತ್ತದೆ. ಇಡೀ ಸಮಾಜ ಅವರ ಜತೆಗಿದೆ. ಕುಟುಂಬದ ಏಕೈಕ ಆಸರೆಯಾಗಿದ್ದ ಅಮಾಯಕ ಯುವಕನ ಬಲಿಯಾಗಿದೆ. ಕುಟುಂಬದ ಜೀವನಾಧಾರಕ್ಕೆ ಪಕ್ಷದ ವತಿಯಿಂದ 5 ಲಕ್ಷ ರೂ. ಹಾಗೂ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಸಹಕಾರ ದಿಂದ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದರು.
ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯ ಸರಣಿ ನಡೆ ದಿದೆ. ಇಲ್ಲಿ ಸರಕಾರ ಸತ್ತು ಹೋಗಿದೆ. ಮುಖ್ಯಮಂತ್ರಿ ಹೋದ ಲ್ಲೆಲ್ಲ ಹತ್ಯೆಗಳಾಗುತ್ತಿವೆ. ಜೆಹಾದಿ ಶಕ್ತಿಗಳಿಗೆ ಬಲ ತುಂಬುವ ಕಾರ್ಯ ವನ್ನು ಮುಖ್ಯಮಂತ್ರಿ ಸಿದ್ದ ರಾಮಯ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪಕ್ಷದ ಅಧ್ಯಕ್ಷರ ಸಲಹೆ ಸೂಚನೆ ಯಂತೆ ಕೊಡಗಿನಿಂದ ಹಿಡಿದು ದ.ಕ. ವರೆಗೆ ಸಾಮರಸ್ಯ ಮೂಡಿಸಲು ವಿಶೇಷ ಕಾರ್ಯಯೋಜನೆ ರೂಪಿಸಲು ತೀರ್ಮಾನಿಸಿದ್ದೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ವೇದವ್ಯಾಸ ಕಾಮತ್, ಡಾ| ವೈ. ಭರತ್ ಶೆಟ್ಟಿ, ಸತ್ಯಜಿತ್ ಸುರತ್ಕಲ್ ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English