ದೀಪಕ್‌ ಹತ್ಯೆಗೆ 2 ದಿನ ಮೊದಲೇ ಹೊಂಚು

3:23 PM, Saturday, January 6th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

supariಮಂಗಳೂರು: ಕಾಟಿಪಳ್ಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್‌ ರಾವ್‌ ಅವರನ್ನು ಹತ್ಯೆ ಮಾಡಲು ದುಷ್ಕರ್ಮಿಗಳು ಎರಡು ದಿನ ಮೊದಲೇ ಹೊಂಚು ಹಾಕಿದ್ದರಾದರೂ ಕೊನೆಯ ಗಳಿಗೆಯಲ್ಲಿ ವಿಫಲವಾಗಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ.

ಬುಧವಾರ ಮಧ್ಯಾಹ್ನ 1.15ಕ್ಕೆ ದೀಪಕ್‌ ರಾವ್‌ ಕೊಲೆಯಾಗಿದ್ದಾರೆ. ಆದರೆ ಅದಕ್ಕೆ ಎರಡು ದಿನ ಹಿಂದೆಯೇ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಆರೋಪಿಗಳು ವಾಹನದಲ್ಲಿ ಆಯುಧಗಳನ್ನು ಹಿಡಿದು ಕೊಂಡು ಕಾಟಿಪಳ್ಳ, ಕೈಕಂಬ ಪ್ರದೇಶದಲ್ಲಿ ಓಡಾಡುತ್ತಿದ್ದರು ಎಂಬ ವಿಚಾರ ನೌಶಾದ್‌ ಮತ್ತು ಮಹಮದ್‌ ಇಶಾìನ್‌ ವಿಚಾರಣೆಯ ವೇಳೆ ಪೊಲೀಸರಿಗೆ ಗೊತ್ತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸ ಲಾಗಿದ್ದು, ನೌಶಾದ್‌ ಮತ್ತು ಮಹಮದ್‌ ಇಶಾìನ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇನ್ನಿಬ್ಬರು ಆರೋಪಿಗಳಾದ ಪಿಂಕಿ ನವಾಜ್‌ ಮತ್ತು ರಿಜ್ವಾನ್‌ ಪೊಲೀಸ್‌ ಕಾರ್ಯಾಚರಣೆ ವೇಳೆ ಪೊಲೀಸರ ಗುಂಡೇಟಿನಿಂದ ಗಾಯ ಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚೇತರಿಸು ತ್ತಿದ್ದಾರೆ ಎಂದು ಪೊಲೀಸರ ಉನ್ನತ ಮೂಲ ಗಳು ತಿಳಿಸಿವೆ.

ನಾಲ್ವರು ಆರೋಪಿಗಳನ್ನು ಪ್ರತ್ಯೇಕ ವಾಗಿ ಪೊಲೀಸರು ವಿಚಾರಣೆ ನಡೆಸಲು ನಿರ್ಧರಿಸಿದ್ದು, ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಯಾದ ಬಳಿಕ ಪ್ರತ್ಯೇಕ ವಿಚಾರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ದೀಪಕ್‌ ರಾವ್‌ ತನ್ನ ಪರಿಸರದಲ್ಲಿ ಹೆಚ್ಚು ಕ್ರಿಯಾಶೀಲವಾಗಿದ್ದು, ನಾನಾ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸುತ್ತಿದ್ದರು. ಅವರ ಚಟುವಟಿಕೆ, ಕ್ರಿಯಾಶೀಲತೆ ದುಷ್ಕರ್ಮಿಗಳ ಕೆಂಗಣ್ಣಿಗೆ ಕಾರಣವಾಗಿತ್ತು. ದೀಪಕ್‌ ಕೊಲೆಗೆ ಇದೂ ಒಂದು ಕಾರಣ ಎಂಬ ಅಂಶ ಆರೋಪಿಗಳ ವಿಚಾರಣೆ ವೇಳೆ ಬಹಿರಂಗವಾಗಿದೆ.

ಕಳೆದ 2 ದಿನಗಳಿಂದ ಅಘೋಷಿತ ಬಂದ್‌ನಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದ ಸುರತ್ಕಲ್‌, ಕಾಟಿಪಳ್ಳ, ಕೃಷ್ಣಾಪುರ ಪ್ರದೇಶ ಗಳಲ್ಲಿ ಶುಕ್ರ ವಾರ ಜನಜೀವನ ಸಾಮಾನ್ಯ ಸ್ಥಿತಿಗೆ ಬಂದಿದೆ. ಪರಿಸ್ಥಿತಿ ಶಾಂತವಾಗಿದ್ದು, ಅಹಿತಕರ ಘಟನೆ ನಡೆದಿಲ್ಲ. ಆದರೆ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ ದಂತಿದೆ.

ಶುಕ್ರವಾರ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಬಸ್‌ ಸಂಚಾರ ಪುನರಾರಂಭ ಗೊಂಡಿದೆ. ಆದರೆ ಜನರಲ್ಲಿ ಆತಂಕ ದೂರ ವಾಗಿಲ್ಲ.

ಸುರತ್ಕಲ್‌, ಕೃಷ್ಣಾಪುರ, ಕಾಟಿಪಳ್ಳ, ಕೈಕಂಬ, ಸೂರಿಂಜೆ ಮತ್ತಿತರ ಪ್ರದೇಶ ಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತು ಮುಂದುವರಿದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English