ದೀಪಕ್‌ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿದ ಜನತೆ

6:26 PM, Saturday, January 6th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

supportಮಂಗಳೂರು: ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ದೀಪಕ್‌ ರಾವ್‌ ಅವರ ಕುಟುಂಬದ ಆರ್ಥಿಕ ನೆರವಿಗೆ ಸಾರ್ವಜನಿಕರು ಸ್ಪಂದಿಸಿದ್ದು, ಅವರ ತಾಯಿ ಪ್ರೇಮಾರ ಬ್ಯಾಂಕ್‌ ಖಾತೆಗೆ ಶನಿವಾರ ಮಧ್ಯಾಹ್ನದ ವೇಳೆಗೆ 24 ಲಕ್ಷ ರೂಪಾಯಿ ಜಮೆಯಾಗಿದೆ.ಶುಕ್ರವಾರ ಸಂಜೆವರೆಗೆ 17,43,859 ರೂ. ಜಮೆಯಾಗಿತ್ತು.

ಈ ಬಗ್ಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, ಸಹಾಯಹಸ್ತ ನೀಡಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾರೆ.

ದೀಪಕ್‌ ಸ್ನೇಹಿತರು ಅವರ ತಾಯಿಯ ಖಾತೆಗೆ ಹಣ ಜಮೆ ಮಾಡುವಂತೆ ವಿನಂತಿಸಿ ಫೇಸ್‌ಬುಕ್‌ ಮತ್ತು ವಾಟ್ಸಪ್‌ಗ್ಳಲ್ಲಿ ಹಾಕಿದ್ದ ಪೋಸ್ಟ್‌ ವೈರಲ್‌ ಆಗಿತ್ತು. ಪೋಸ್ಟ್‌ ನೋಡಿ ಆನ್‌ಲೈನ್‌ ಮೂಲಕ ಬ್ಯಾಂಕ್‌ ಖಾತೆಗೆ ಹಣ ವರ್ಗಾಯಿಸಲು ಸಹೃದಯಿ ಸಾರ್ವಜನಿಕರು ಮುಂದೆ ಬಂದಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ #SupportDeepakFamily ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English