ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ.ಎ. ಮೊಹಿದಿನ್ ರನ್ನು ಭೇಟಿಯಾದ ಸಿಎಂ

1:07 PM, Monday, January 8th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

hospitalಮಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ.ಎ. ಮೊಹಿದಿನ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬೆಳಗ್ಗೆ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿವಾರ ರಾತ್ರಿ ಮಂಗಳೂರಿನಲ್ಲಿ ತಂಗಿದ್ದರು.

hospital-2ನಗರದ ಕೊಡಿಯಲ್ ಬೈಲ್ ನಲ್ಲಿರುವ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ.ಎ. ಮೊಹಿದಿನ್ ಅವರನ್ನು ಮುಖ್ಯಮಂತ್ರಿ ಭೇಟಿಯಾಗಿ, ಆರೋಗ್ಯ ವಿಚಾರಿಸಿ ನಂತರ ವೈದ್ಯರ ಜೊತೆ ಸಮಾಲೋಚನೆ ನಡೆಸಿದರು.

ಈ ಸಂದರ್ಭ ಸಚಿವರಾದ ರಮಾನಾಥ ರೈ, ಯು.ಟಿ. ಖಾದರ್, ಶಾಸಕರಾದ ಮೊಯ್ದಿನ್ ಬಾವ, ಜೆ.ಆರ್. ಲೋಬೊ, ಐವನ್ ಡಿಸೋಜ, ಯೆನೆಪೊಯ ಅಬ್ದುಲ್ಲಾ ಕುಂಞಿ, ಬಿ.ಎ. ಮೊಹಿದಿನ್ ಅವರ ಕುಟುಂಬದ ಸದಸ್ಯರು ಹಾಗು ಇತರರು ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English