- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಗಾಯನ ವಿವಾದಕ್ಕೆ ತೆರೆ

National-Anthem [1]ನವದೆಹಲಿ: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಗಾಯನ ವಿವಾದಕ್ಕೆ ತೆರೆ ಬಿದ್ದಿದೆ. ಇನ್ಮುಂದೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಅಗತ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಚಿತ್ರಮಂದಿರಗಳಲ್ಲಿನ ಯಾವುದೇ ಚಲನಚಿತ್ರ ಪ್ರಸಾರವಾಗುವುದಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಗಾಯನ ಕಡ್ಡಾಯವಾಗಿತ್ತು. ಆದರೆ, ಈ ಬಗ್ಗೆ ತೀವ್ರ ಪರ-ವಿರೋಧ ಚರ್ಚೆ ನಡೆದ ಹಿನ್ನಲೆಯಲ್ಲಿ ಸುಪ್ರೀಂ ತನ್ನ ಆದೇಶದಲ್ಲಿ ಬದಲಾವಣೆ ಮಾಡಬೇಕೆಂದು ಕೇಂದ್ರ ಸರ್ಕಾರ ಮನವಿ ಸಲ್ಲಿಸಿತ್ತು.

ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿ ಪರಿಗಣಿಸಿದ ಸರ್ವೋಚ್ಛ ನ್ಯಾಯಾಲಯ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಮತ್ತು ಆಗ ಪ್ರೇಕ್ಷಕರು ಎದ್ದು ನಿಂತು ಗೌರವ ಸೂಚಿಸುವುದು ಅಗತ್ಯವಿಲ್ಲ ಎಂದು ಮಹತ್ವದ ಆದೇಶ ನೀಡಿದೆ. ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಎಂಬ ಆದೇಶ ಜಾರಿಗೊಂಡ ಒಂದು ವರ್ಷ ನಂತರ ಸುಪ್ರೀಂ ತನ್ನ ಆದೇಶದಲ್ಲಿ ಮಾರ್ಪಾಡು ಮಾಡಿದೆ.

ಇದೇ ವೇಳೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ವಿಷಯ ಚಿತ್ರಮಂದಿರಗಳ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.