ಪೋಲಿಸ್ ಸಮವಸ್ತ್ರ ಕಳಚಿಟ್ಟು ರಾಜಕಾರಣಿಯಾಗಲು ಹೊರಟ ಮಂಗಳೂರಿನ ಮದನ್

10:10 AM, Wednesday, January 10th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

madanಮಂಗಳೂರು: ಯೂನಿಫಾಂ ಕಳಚಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ರಾಜಕೀಯ ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಮಂಗಳೂರಿನ ಬಜಪೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮದನ್ ತಮ್ಮ ಪೊಲೀಸ್ ವೃತ್ತಿಗೆ ವಿದಾಯ ಹೇಳಿದ್ದಾರೆ. ಮಂಗಳೂರು ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ ಬಜಪೆ ಸ್ಟೇಷನ್ ನಲ್ಲಿ ಸಬ್ ಇನ್ಸ್ ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮದನ್ ತಮ್ಮ ಪೋಲಿಸ್ ಡ್ಯೂಟಿ ಗೆ ಗುಡ್ ಬೈ ಹೇಳಿ ಸಕ್ರಿಯ ರಾಜಕೀಯಕ್ಕೆ ಇಳಿಯಲು ನಿರ್ಧರಿಸಿದ್ದಾರೆ.

ಮೂಲತಃ ಕೊಡಗಿನವರಾದ ಮದನ್ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಬಂದರು ಹಾಗು ನಂತರ ಬಜಪೆ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಮದನ್ ಇತ್ತೀಚೆಗೆ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಆದರೆ ಮದನ್ ಅವರ ರಾಜೀನಾಮೆ ಸ್ವೀಕೃತಗೊಂಡಿರಲಿಲ್ಲ. ತಮ್ಮ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮದನ್ ಅವರ ಮೇಲೆ ಒತ್ತಡ ಹೇರಿದ್ದರು. ಆದರೆ ಮದನ್ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ ಎಂದು ಹೇಳಲಾಗಿದೆ.

ಮದನ್ ಸಕ್ರಿಯ ರಾಜಕಾರಣಕ್ಕೆ ಇಳಿಯುವ ಸಂಬಂಧ ಈಗಾಗಲೇ ತಮ್ಮ ಆಪ್ತ ವಲಯದಲ್ಲಿ ಹಾಗೂ ಸೇವಾ ಸಂಸ್ಥೆಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ಹಿಂದೆ ಕಾಲೇಜು ದಿನಗಳಲ್ಲಿ ಎಬಿವಿಪಿ ವಿದ್ಯಾರ್ಥಿ ಸಂಘಟನೆಯ ಮುಖಂಡರಾಗಿದ್ದ ಮದನ್ ಬಿಜೆಪಿ ಸೇರಿ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕರಾವಳಿ ಭಾಗದಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಸಂಘ ಪರಿವಾರದ ಮುಖಂಡರೊಂದಿಗೆ ಮದನ್ ಈಗಾಗಲೇ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮದನ್ ಮಂಗಳೂರು ಬಂದರ್ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ತಮ್ಮ ಸಾಮಾಜಿಕ ಕಾರ್ಯಗಳಿಂದ ಮದನ್ ಜನರ ವಿಶ್ವಾಸ ಗಳಿಸಿದ್ದರು. ಬಂದರು ಠಾಣಾ ವ್ಯಾಪ್ತಿಯಲ್ಲಿ ಮದನ್ ಅವರ ಫ್ಯಾನ್ ಫಾಲೋವರ್ ಯುವಕರ ದಂಡೇ ಇದೆ. ಈ ಹಿನ್ನೆಯಲ್ಲಿ ಬಿಜೆಪಿ ಟಿಕೆಟ್ ನೀಡಿದರೆ ಮಂಗಳೂರು ದಕ್ಷಿಣ ಕ್ಷೇತ್ರದಿಂದಲೇ ಚುನಾವಣಾ ಕಣಕ್ಕೆ ಇಳಿಯಲು ಮದನ್ ಚಿಂತನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English