ಬಿಜೆಪಿ, ಆರ್ ಎಸ್ಎಸ್ ನವರೇ ಒಂಥರ ಉಗ್ರಗಾಮಿಗಳು: ಸಿಎಂ

5:09 PM, Wednesday, January 10th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

chamarajanagarಚಾಮರಾಜನಗರ: ಬಿಜೆಪಿ, ಬಜರಂಗದಳ, ಆರೆಸ್ಸೆಸ್ಸನವರೇ ಒಂಥರ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತೀವ್ರ ವಾಗ್ದಾಳಿ ನಡೆಸುವ ಮೂಲಕ ವಿವಾದದ ಕಿಡಿಹೊತ್ತಿಸಿದ್ದಾರೆ.

ಚಾಮರಾಜನಗರದ ನಾಗವಳ್ಳಿ ಹೆಲಿಪ್ಯಾಡ್ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಸರಿ ಪಡೆ ನಾಯಕರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಪ್ರತಿಕ್ರಿಯೆ ನೀಡಿರುವುದಾಗಿ ಖಾಸಗಿ ವಾಹಿನಿಗಳು ವರದಿ ಮಾಡಿವೆ.

ಆರ್ ಎಸ್ಎಸ್ ಆಗಲಿ, ಪಿಎಫ್ಐ ಆಗಲಿ ಯಾವುದೇ ಸಂಘಟನೆಯಾದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಿಬಿಐ ಜಾರ್ಜ್ ಶೀಟ್ ಹಾಕಿದ್ದು, ಅದರಲ್ಲಿ ಪಿಎಫ್ಐ ಸಂಘಟನೆ ಸದಸ್ಯರ ಹೆಸರನ್ನು ಉಲ್ಲೇಖಿಸಿದೆ. ಪಿಎಫ್ ಐ ಸಂಘಟನೆಯನ್ನು ನಿಷೇಧಿಸುತ್ತೀರಾ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡುವ ಭರದಲ್ಲಿ ಅಲ್ರಿ..ಬಿಜೆಪಿ, ಆರ್ ಎಸ್ ಎಸ್, ಬಜರಂಗದಳದವರು ಕೂಡಾ ಒಂಥರ ಉಗ್ರಗಾಮಿಗಳೇ ಎಂದು ಹೇಳುವ ಮೂಲಕ ಪರೋಕ್ಷವಾಗಿ ಈ ಸಂಘಟನೆಗಳನ್ನೂ ನಿಷೇಧಿಸಬೇಕಲ್ಲಾ ಎಂಬುದಾಗಿ ಪ್ರಶ್ನಿಸಿರುವುದಾಗಿ ವರದಿ ವಿವರಿಸಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English