ಬಂಟ್ವಾಳ: ಶಂಭೂರು ಗ್ರಾಮದ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು 2017-18ನೇ ಸಾಲಿನ ರಾಷ್ಟ್ರೀಯ ಕಲೋತ್ಸವ ಸ್ಪರ್ಧೆಯ ರಂಗಭೂಮಿ ವಿಭಾಗದಲ್ಲಿ ಪ್ರದರ್ಶಿಸಿದ ಕಿಷ್ಕಿಂದಾ ಕೌತುಕ ಯಕ್ಷಗಾನವು ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡಿದ್ದು, ಈ ವಿದ್ಯಾರ್ಥಿಗಳನ್ನು ಮಂಗಳವಾರ ಶಾಲೆಗೆ ಆಗಮಿಸಿದಾಗ ಅದ್ದೂರಿಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭ ಶಾಲಾ ಮೇಲುಸ್ತುವಾರಿ ಕಾರ್ಯಾಧ್ಯಕ್ಷ ಹಾಗೂ ಬೊಂಡಾಲ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ, ದೈಹಿಕ ಶಿಕ್ಷಣ ಶಿಕ್ಷಕ ಚೆನ್ನಪ್ಪ ಕೆ. ಜಾಲ್ಸೂರು, ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಗಾಯತ್ರಿ ಆರ್. ಸಪಲ್ಯ, ನರಿಕೊಂಬು ಗಾಮ ಪಂಚಾಯತ್ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಗಾಮ ಪಂಚಾಯತ್ ಸದಸ್ಯರು, ವಿದ್ಯಾಂಗ ಇಲಾಖೆಯ ಉಪನಿರ್ದೇಶಕ ವೈ. ಶಿವರಾಮಯ್ಯ, ಬಿಆರ್‌ಪಿ ನಾರಾಯಣ ಗೌಡ, ಸ್ಥಳೀಯ ಗಣ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕ ವೃಂದ, ಹೆತ್ತವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English