ದೀಪಕ್‌ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಯತ್ನಿಸಿದ ಪೊಲೀಸರಿಗೆ ಸನ್ಮಾನ

11:06 AM, Friday, January 12th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

T-R-Sureshಮಂಗಳೂರು: ಕಾಟಿಪಾಳ್ಳ ದೀಪಕ್‌ ಕೊಲೆ ಪ್ರಕರಣದಲ್ಲಿ ಕರ್ತವ್ಯ ನಿಷ್ಠೆ ಮೆರೆದ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ಪೊಲೀಸ್ ಆಯುಕ್ತರು ಸನ್ಮಾನಿಸಿದರು.

ಜ. 3 ರಂದು ನಗರದ ಸುರತ್ಕಲ್‌ನ ಕಾಟಿಪಾಳ್ಳದಲ್ಲಿ ನಡೆದಿದ್ದ ದೀಪಕ್‌ ರಾವ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಆರೋಪಿಗಳನ್ನು ಹಿಡಿಯಲು ಯತ್ನಿಸಲಾಗಿತ್ತು. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಂಜೆ ಎಂಬ ಸ್ಥಳದಲ್ಲಿ ಬ್ಯಾರಿಕೇಡ್ ಹಾಕಿ ವಾಹನವನ್ನು ತಪಾಸಣೆ ಮಾಡುತ್ತಿದ್ದ ಸಮಯ ಆರೋಪಿಗಳು ಸಂಚರಿಸಿದ ಕಾರನ್ನು ತಡೆಯಲು ಪ್ರಯತ್ನಿಸಿದರು.

ಪ್ರಕರಣದ ಆರೋಪಿಗಳ ಪತ್ತೆಗೆ ತಮ್ಮ ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಠೆಯನ್ನು ಮೆರೆದ ಗೃಹ ರಕ್ಷಕ ದಳದ ಸಿಬ್ಬಂದಿಗಳಾದ ಮಲ್ಲಿಕಾ ಬಿ ಮತ್ತು ಹರೀಶ್ ಪೂಜಾರಿಯವರನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರು ತಲಾ 5000/- ರೂ. ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English