ಲೈಟ್ ಕಂಬಕ್ಕೆ ಕಾರು ಢಿಕ್ಕಿ: ನಾಲ್ವರಿಗೆ ಗಾಯ

3:53 PM, Monday, January 15th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

accidentಕಾಸರಗೋಡು: ಆಲ್ಟೊ ಕಾರೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೂಡೆದು ನಾಲ್ವರು ಗಾಯಗೊಂಡ ಘಟನೆ ಉದುಮ ರೈಲ್ವೆ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.

accident-2ಮಂಗಳೂರು ವಿಮಾನ ನಿಲ್ದಾಣದಿಂದ ವೆಸ್ಟ್ ಎಳೇರಿಯ ಎಂಬಲ್ಲಿನ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೋಲಾರ್ ದೀಪ ಅಳವಡಿಸಲು ಹಾಕಲಾಗಿದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ಫೈಝಲ್, ಆಯಿಷಾ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ಫೈಝಲ್ ಗಲ್ಫ್ ನಿಂದ ಆಗಮಿಸಿದ್ದು, ಅವರನ್ನು ಕರೆದುಕೊಂಡು ಬರುತ್ತಿದ್ದಾಗ ಈ ಅಪಘಾತ ನಡೆದಿದೆ. ಗಾಯಾಳುಗಳನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English