ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್ ರಾವ್ ಮನೆಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಭೇಟಿ ನೀಡಿ ಕುಟುಂಬದ ಜತೆ ಮಾತುಕತೆ ನಡೆಸಿದರು.
ಮಾತುಬಾರದ ದೀಪಕ್ ಸಹೋದರ ಸತೀಶ್‌ಗೆ ಕೆಐಒಸಿಎಲ್‌ನಲ್ಲಿ ಕೆಲಸದ ಭರವಸೆ ನೀಡಿದ ಸಚಿವರು, ಕೆಐಒಸಿಎಲ್‌ನ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದ್ದೇನೆ. ಯಾವುದೇ ಕ್ಷಣದಲ್ಲಿ ದೀಪಕ್ ಸಹೋದರ ಸತೀಶ್ ಕೆಲಸಕ್ಕೆ ಸೇರಿಕೊಳ್ಳಬಹುದು ಎಂದರು.
ಮೃತರಾದ ದೀಪಕ್‌ರನ್ನು ಮರಳಿ ಪಡೆಯಲು ಸಾಧ್ಯವಿಲ್ಲ. ದೀಪಕ್ ಸಹೋದರ ಸತೀಶ್‌ಗೆ ಕೆಲಸದ ವ್ಯವಸ್ಥೆ ಮಾಡಲಾಗಿದೆ. ಹಿಂದೂ ಸಮಾಜದ ಜತೆ ನಾನಿದ್ದೇನೆ ಎಂದು ಅವರು ಹೇಳಿದರು.
ಇದೇ ವೇಳೆ ಸಚಿವರು ವೈಯಕ್ತಿಕವಾಗಿ 25 ಸಾವಿರ ರೂ. ಮೊತ್ತದ ಚೆಕ್ ಅನ್ನು ದೀಪಕ್ ಕುಟುಂಬಕ್ಕೆ ಹಸ್ತಾಂತರಿಸಿದರು. ಸಚಿವರಿಗೆ ನಳಿನ್ ಕುಮಾರ್ ಕಟೀಲ್, ಬಿಜೆಪಿ ಮುಖಂಡ ಡಾ. ಭರತ್ ಶೆಟ್ಟಿ ಸಾಥ್ ನೀಡಿದರು.
Click this button or press Ctrl+G to toggle between Kannada and English