ಮಂಗಳೂರು: ನಗರದ ಉರ್ವ ಮಾರಿಗುಡಿ ಸಮೀಪದಲ್ಲಿನ ಒಂದು ಎಕರೆ ಜಮೀನಿನಲ್ಲಿ 6.50 ಕೋಟಿ ರೂ. ವೆಚ್ಚದ ಅಂತಾರಾಷ್ಟ್ರೀಯ ಗುಣಮಟ್ಟದ ಸುಸಜ್ಜಿತ ಬ್ಯಾಡ್ಮಿಂಟನ್ ಮತ್ತು ಕಬಡ್ಡಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಗೊಳ್ಳಲಿದೆ ಎಂದು ಶಾಸಕ , ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿದ್ದು, 2020ರ ಒಳಗಾಗಿ ಕ್ರೀಡಾಂಗಣ ನಿರ್ಮಾಣವಾಗುವ ನಿರೀಕ್ಷೆ ಇದೆ ಎಂದರು.
ಕ್ರೀಡಾಂಗಣ ನಿರ್ಮಾಣವಾದರೆ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಮತ್ತು ಕಬಡ್ಡಿ ಪಂದ್ಯಾವಳಿಗಳನ್ನು ಆಯೋಜಿಸಲು ಸಾಧ್ಯವಾಗಲಿದೆ. ಉರ್ವದಲ್ಲಿ ಈ ಹಿಂದೆ ಪೊಲೀಸ್ ಠಾಣೆಯಿದ್ದ 1.13 ಎಕರೆ ಜಾಗವನ್ನು ರಾಜ್ಯ ಸರ್ಕಾರವು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಗೆ ಮಂಜೂರು ಮಾಡಿದೆ. ದ.ಕ. ಜಿಲ್ಲಾ ಅಮೆಚೂರು ಎಸೋಸಿಯೇಶನ್ ಸಿಬ್ಬಂದಿ ಇಲ್ಲಿ ಒಳಾಂಗಣ ಕ್ರೀಡಾಂಗಣ ನಡೆಸಲು ಸರ್ಕಾರದ ಅನುಮೋದನೆಗಾಗಿ ನನ್ನ ಬಳಿ ಬಂದಿದ್ದರು. ಅದರಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಇದೀಗ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಕ್ರೀಡಾ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯೆಲ್ ಮುತುವರ್ಜಿ ವಹಿಸಿ ಅನುಮೋದನೆ ನೀಡಿದ್ದಾರೆ. ಉಡುಪಿಯನ್ನು ಹೊರತುಪಡಿಸಿದರೆ ರಾಜ್ಯದಲ್ಲೇ ಅತಿ ಹೆಚ್ಚು ಕ್ರೀಡಾ ಅನುದಾನ ದೊರಕಿದ್ದು ಮಂಗಳೂರು ಕ್ಷೇತ್ರಕ್ಕೆ ಎಂದರು.
ಮಂಗಳಾ ಬ್ಯಾಡ್ಮಿಂಟನ್ ಮತ್ತು ಕಬಡ್ಡಿ ಅಸೋಸಿಯೇಶನ್ ಮುಖಂಡರಾದ ಸದಾನಂದ ಶೆಟ್ಟಿ, ಪುರುಷೋತ್ತಮ ಪೂಜಾರಿ, ರತನ್ ಶೆಟ್ಟಿ, ದೀಪಕ್, ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English