ಸಿಂಧೂರಿ ವರ್ಗಾವಣೆ ವಿರೋಧಿಸಿ ದೇವೇಗೌಡರಿಂದ ರಾಷ್ಟ್ರಪತಿಗೆ ಪತ್ರ : ಸಿಎಂ

5:55 PM, Tuesday, January 23rd, 2018
Share
1 Star2 Stars3 Stars4 Stars5 Stars
(5 rating, 1 votes)
Loading...

rohiniಮೈಸೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗ ತಡೆಯಾಜ್ಞೆ ನೀಡಿರುವುದು ನನಗೆ ಗೊತ್ತಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಾಗದೆ ವರ್ಗಾವಣೆಗೆ ತಡೆಯಾಜ್ಞೆ ನೀಡಲು ಹೇಗೆ ಸಾಧ್ಯ? ಇದು ಹಸ್ತಕ್ಷೇಪವಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಇಂದು ಎರಡು ದಿನಗಳ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ ಅವರು, ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಾಸನ ಜಿಲ್ಲಾಧಿಕಾರಿಯನ್ನು ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೆ ಚುನಾವಣಾ ಆಯೋಗ ತಡೆಯಾಜ್ಞೆ ನೀಡಿರುವುದು ನನಗೆ ಗೊತ್ತಿಲ್ಲ. ಚುನಾವಣಾ ನೀತಿ ಸಂಹಿತೆ ಜಾರಿಯಾಗದೆ ವರ್ಗಾವಣೆಗೆ ತಡೆಯಾಜ್ಞೆ ನಿಡುವುದು ಹೇಗೆ ಸಾಧ್ಯ? ಇದು ಹಸ್ತಕ್ಷೇಪವಾಗುತ್ತದೆ. ಈ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ದೇವೇಗೌಡರಿಗೆ ಇವರೊಬ್ಬರೆ ಪ್ರಾಮಾಣಿಕ ಅಧಿಕಾರಿಯಾಗಿ ಕಂಡಿರಬೇಕು ಎಂದು ವರ್ಗಾವಣೆ ಬಗ್ಗೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ರಾಷ್ಟ್ರಪತಿಗೆ ಪತ್ರ ಬರೆಯುವ ವಿಚಾರದ ಬಗ್ಗೆ ವ್ಯಂಗ್ಯವಾಡಿದರು.

ಇನ್ನು ಸಿಎಂ ಬಜೆಟ್ ಮಂಡಿಸಲು ಸಾಧ್ಯವಿಲ್ಲ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನದಲ್ಲಿ ಈ ರೀತಿ ಎಲ್ಲಾದರೂ ಹೇಳಿದ್ದಾರಾ? ಸಂವಿಧಾನವನ್ನು ಓದಿಕೊಳ್ಳಬೇಕಲ್ಲವೇ? ಯಡಿಯೂರಪ್ಪನವರಿಗೆ ಯಾವ ಸಂವಿಧಾನದಲ್ಲಿ ಹೇಳಿದೆಯಂತೆ? ಎಂದು ಪ್ರಶ್ನಿಸಿದ ಅವರು ನನ್ನ ಮೇಲೆ ಕೇಸ್‌‌ ಇದ್ದರೆ ಕೋರ್ಟ್‌ಗೆ ಹೋಗಲಿ, ಸುಮ್ಮನೆ ಪುಂಗಿ ಊದಬಾರದು ಎಂದು ವಾಗ್ದಾಳಿ ನಡೆಸಿದರು.

ಮಹದಾಯಿ ಹೋರಾಟಗಾರರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಅವರಿಗಿರುವ ಅಜ್ಞಾನಕ್ಕೆ ನಗಬೇಕೋ, ಅಳಬೇಕೋ ಗೊತ್ತಾಗುತ್ತಿಲ್ಲ. ಯಾರೋ ಮಾತು ಕೇಳಿ ಬಂದ್‌, ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಅಲ್ಲವೇ ತೊಂದರೆ ಎಂದು ರಾಜ್ಯದಲ್ಲಿ ನಡೆಸಿದ ಸಾಧನಾ ಸಮಾವೇಶದ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English