ಮಂಗಳೂರು : ಎಲ್.ಕೆ. ಆಡ್ವಾಣಿ ಅವರು ಭ್ರಷ್ಟಾಚಾರದ ವಿರುದ್ಧ ರಥಯಾತ್ರೆ ಕೈಗೊಂಡಿರುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ದೇಶದಲ್ಲೇ ಭ್ರಷ್ಟಾಚಾರದಲ್ಲಿ ಅಗ್ರಸ್ಥಾನದಲ್ಲಿರುವ ರಾಜ್ಯ ಕರ್ನಾಟಕ ಎಂದು ಕುಖ್ಯಾತಿಗೆ ಒಳಗಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಜನಾರ್ದನ ರೆಡ್ಡಿ ಇವರೆಲ್ಲ ಹಲವು ಹಗರಣಗಳಲ್ಲಿ ಭಾಗಿಯಾಗಿ ಜೈಲು ಸೇರಬೇಕಾಯಿತು.
ನಗರ ಪಾಲಿಕೆಯಲ್ಲಿಯೂ ಆಡಳಿತಯಂತ್ರ ಸಂಪೂರ್ಣ ಕುಸಿದಿದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲಾಗಿಲ್ಲ, ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದೆ. ರಸ್ತೆಗಳ ಸ್ಥಿತಿ ಶೋಚನೀಯವಾಗಿದೆ ಎಂದು ತಿಳಿಸಿದರು.
ಮಾಜಿ ಮೇಯರ್ ಶಶಿಧರ , ಪಕ್ಷದ ವಕ್ತಾರ ಟಿ.ಕೆ. ಸುಧೀರ್, ಹಿಂದುಳಿದ ಘಟಕದ ಜಿಲ್ಲಾ ಕಾರ್ಯದರ್ಶಿ ಮೋಹನ್ ಮೆಂಡನ್, ಕಾರ್ಪೊರೇಟರ್ ನಾಗೇಂದ್ರ, ಯುವಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಡೆನಿಸ್ ಡಿಸಿಲ್ವ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English