ಕೇಂದ್ರ ಸಚಿವ ಜಾವಡೇಕರ್‌ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

10:25 AM, Wednesday, January 24th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

jawadekarಮಂಗಳೂರು: ದೇಶದಲ್ಲಿಯೇ ಕಾಂಗ್ರೆಸ್ ಸರ್ಕಾರ ದರೋಡೆ, ದೌರ್ಜನ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂಬ ಬಿಜೆಪಿ ಹೇಳಿಕೆಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಕ್ರೈಂ ರೇಟ್‌ನಲ್ಲಿ ಕರ್ನಾಟಕ ಹತ್ತನೇ ಸ್ಥಾನದಲ್ಲಿದೆ. ಆದರೆ, ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಅಪರಾಧ ಪ್ರಕರಣ ಹೆಚ್ಚಿವೆ. ಕರ್ನಾಟಕದ ಬಗ್ಗೆ ಮತನಾಡುವ ಮೊದಲು ಉತ್ತರ ಪ್ರದೇಶದ ಸ್ಥಿತಿಯನ್ನು ಅವರು ಅರಿಯಬೇಕಿದೆ ಎಂದು ಟಾಂಗ್‌ ನೀಡಿದರು.

ಕರ್ನಾಟಕ ಬಂದ್ ಹಿಂದೆ ರಾಜ್ಯ ಸರ್ಕಾರದ ಕೈವಾಡ ಆರೋಪದ ಬಗ್ಗೆ ಮಾತನಾಡಿ, ಇದರಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಇಲ್ಲ, ರೈತರೇ ದಿನ ನಿಗದಿಪಡಿಸಿ ಬಂದ್‌ಗೆ ಕರೆ ನೀಡಿದ್ದಾರೆ. ಬಂದ್ ಮಾಡಿ ರಾಜ್ಯ ಸರ್ಕಾರಕ್ಕೆ ಲಾಭ ಇಲ್ಲವೆಂದು ಸ್ಪಷ್ಟಪಡಿಸಿದರು.

ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಒಬ್ಬ ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿದ್ದು, ಇಲಾಖೆಯ ನಿಯಮಗಳ ಪ್ರಕಾರವೇ ವರ್ಗಾವಣೆ ಮಾಡಲಾಗಿದೆ. ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English