ಮಂಗಳೂರು: ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮುಖ ಪರಿಚಯ ಆಗೋ ಮೊದಲೇ ವರ್ಗಾ ಮಾಡಲಾಗುತ್ತಿದೆ. ದಕ್ಷ ಅಧಿಕಾರಿಗಳಿಗೆ ರಾಜ್ಯದಲ್ಲಿ ಉಳಿಗಾಲ ಇಲ್ಲ. ರಾಜ್ಯ ಸರ್ಕಾರಕ್ಕೆ ತಗ್ಗಿ, ಬಗ್ಗಿ ಇದ್ದವರಿಗೆ ರಕ್ಷಣೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕ ಬಂದ್ ಗೆ ಕರೆ ನೀಡುವ ಸಂಘಟನೆಗಳಿಗೆ ಸರ್ಕಾರ ಬೆಂಬಲ ನೀಡುತ್ತದೆ. ದರೋಡೆಕೋರರನ್ನು ಹೊಂದಿದ 2ನೇ ರಾಜ್ಯ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರುತ್ತಿರುವುದು ಸಿಎಂ ಸಿದ್ದರಾಮಯ್ಯಗೆ ಭಯ ಉಂಟು ಮಾಡಿದೆ. ಈ ಕಾರಣಕ್ಕಾಗಿ ಕೆಲವು ಕನ್ನಡ ಸಂಘಟನೆಗಳಿಗೆ ಕುಮ್ಮಕ್ಕು ನೀಡಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ ಎಂದು ಆರೋಪಿಸಿದರು.
Click this button or press Ctrl+G to toggle between Kannada and English