ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯ ಸ್ನಾತಕೋತ್ತರ ವಿಭಾಗದಿಂದ ಮನಸ್ವಿ- ಸಮಾಲೋಚನಾ ಹಾಗೂ ಸಂವಹನ ಕಲೆಯ ಕುರಿತು ಎರಡು ದಿನಗಳ ರಾಷ್ಟ್ರ ಮಟ್ಟದ ಕಾರ್ಯಾಗಾರ ನಡೆಯಿತು.
ಆಳ್ವಾಸ್ ಹೆಲ್ತ್ ಸೆಂಟರ್‍ನ ಆಡಳಿತ ನಿರ್ದೇಶಕ ಡಾ.ವಿನಯ ಆಳ್ವ ಕಾರ್ಯಾಗಾರ ಉದ್ಘಾಟಿಸಿ ಪ್ರಸ್ತುತ ಸಂವಹನ ಕಲೆಯ ಪ್ರಾಮುಖ್ಯತೆಯನ್ನು ತಿಳಿಸಿದರು.
ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲಡಾ.ಬಿ.ವಿನಯಚಂದ್ರ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಮನೋವಿಭಾಗದ ಮುಖ್ಯಸ್ಥರಾದ ಡಾ.ಅನಿಲ್ ಕುಮಾರ್ ರೈ ಅವರು ಕಾರ್ಯಾಗಾರದ ರೂಪುರೇಷೆಯನ್ನು ತಿಳಿಸಿದರು. ಮನೋವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರವಿಪ್ರಸಾದ್ ಹೆಗ್ಡೆ ಸ್ವಾಗತಿಸಿದರು.
ಸ್ನಾತಕೋತ್ತರ ವಿಭಾಗದ್ ಡೀನ್ ಡಾ.ಮಂಜುನಾಥ ಭಟ್, ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಮ್ಯಾಕ್ಸಿಮ್ ಪಿರೇರಾ ಉಪಸ್ಥಿತರಿದ್ದರು. ಶಿಬಿರದಲ್ಲಿ 5 ಆಯುರ್ವೇದ ಮಹಾ ವಿದ್ಯಾಲಯಗಳ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದರು.
Click this button or press Ctrl+G to toggle between Kannada and English