ಮಂಗಳೂರು: ದೇಶಾದ್ಯಂತ ಇಂದು ತೆರೆ ಕಾಣಲಿರುವ ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ ಮಂಗಳೂರಿನಲ್ಲಿಯೂ ರಾಜಸ್ಥಾನ ಮೂಲದ ರಜಪೂತ ಸಮುದಾಯದಿಂದ ವಿರೋಧ ವ್ಯಕ್ತವಾಗಿದೆ.
ರಜಪೂತ್ ಕರಣಿ ಸೇನಾದ ಮಂಗಳೂರು ಸಮಿತಿಯ ಪದಾಧಿಕಾರಿಗಳು ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ನಗರ ಪೊಲೀಸ್ ಕಮಿಷನರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿನ ಚಿತ್ರಮಂದಿರಗಳಲ್ಲಿ ಪದ್ಮಾವತ್ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಆದರೆ ಈ ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದನ್ನು ಪೊಲೀಸ್ ಕಮಿಷನರ್ ಅವರು ಸಮಿತಿಯ ಗಮನಕ್ಕೆ ತಂದಿದ್ದಾರೆ.
ಚಿತ್ರದಲ್ಲಿ ಸತ್ಯವನ್ನು ಮರೆಮಾಚಿ ರಜಪೂತರನ್ನು ವಿಡಂಬನಾತ್ಮಕವಾಗಿ ಚಿತ್ರಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಚಿತ್ರ ಪ್ರದರ್ಶನ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
Click this button or press Ctrl+G to toggle between Kannada and English