ಬೆಂಗಳೂರು: ಮಹದಾಯಿ ನದಿ ನೀರಿನ ಸಮಸ್ಯೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಬಂದ್‌ನಿಂದಾಗಿ ಸ್ಥಗಿತಗೊಳಿಸಲಾಗಿದ್ದ ಸರ್ಕಾರಿ ಬಸ್‌ಗಳ ಸಂಚಾರ ಗುರುವಾರ ಸಂಜೆ 4 ಗಂಟೆಯ ವೇಳೆಗೆ ರಾಜ್ಯಾಧ್ಯಂತ ಪುನರಾರಂಭಗೊಂಡಿದೆ. ಬೆಂಗಳೂರು ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ.
ರಾಜ್ಯದೆಲ್ಲೆಡೆ 800ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚಾರ ಆರಂಭಿಸಿದ್ದು ಇದರಿಂದಾಗಿ ಪರದಾಡುತ್ತಿದ್ದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
ಬೆಳಗಿನಿಂದ ಸ್ಥಗಿತಗೊಳಿಸಲಾಗಿದ್ದ ಬಿಎಂಟಿಸ್ ಬಸ್ ಸಂಚಾರವನ್ನು ಸಂಜೆ ಆರಂಭಿಸಲಾಗಿದ್ದು ಪ್ರಯಾಣಿಕರು ನಿರಾಳರಾಗಿದ್ದಾರೆ.
ಪರಿಸ್ಥಿತಿಯನ್ನು ನೋಡಿಕೊಂಡು ಅಹಿತಕರ ಘಟನೆಗಳು ವರದಿಯಾಗದ ಹಿನ್ನಲೆಯಲ್ಲಿ ಬಸ್ ಸಂಚಾರ ಪುನರಾರಂಭಿಸಲಾಗಿದೆ.
Click this button or press Ctrl+G to toggle between Kannada and English