ಮಂಗಳೂರು: ಮೂಡಿಗೆರೆಯಿಂದ ಕೇರಳದ ಕಡೆಗೆ ಕೋಣಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ತೊಕ್ಕೊಟ್ಟು ಬಳಿ ವಶಪಡಿಸಿಕೊಂಡ ಉಳ್ಳಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಚೆರ್ಕಳ ಮೂಲದ ದಿವಾಕರ ನಾಯರ್(47), ಇನ್ನೋರ್ವ ಕೇರಳ ಮೂಲದ ಸ್ವಹಿಬ್ ಹಬೀಬ್(33) ಎಂದು ಗುರುತಿಸಲಾಗಿದೆ.
ಆರೋಪಿಗಳು ಮೂಡಿಗರೆಯಿಂದ 20 ಕೋಣಗಳನ್ನು ಲಾರಿಯಲ್ಲಿ ತುಂಬಿಸಿ ಕಸಾಯಿಖಾನೆಗೆಂದು ಕೇರಳಕ್ಕೆ ಸಾಗಿಸುತ್ತಿದ್ದರೆನ್ನಲಾಗಿದೆ. ಡಿಸಿಪಿಯವರ ನಿರ್ದೇಶನದ ಮೇರೆಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಇನ್ಸ್‌ಪೆಕ್ಟರ್ ಗೋಪಿಕೃಷ್ಣ ಮತ್ತು ಎಸ್‌ಐ ವಿನಾಯಕ್ ಅವರ ತಂಡ ದಾಳಿ ನಡೆಸಿ ಲಾರಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಜಾಪ್ರಭುತ್ವದ ಆಶಯಗಳಗೆ ಅನುಗುಣವಾಗಿ ಸಾಂಸ್ಕೃತಿಕವಾಗಿ ದೇಶವನ್ನು ಕಟ್ಟಲು ಪ್ರಯತ್ನಿಸುತ್ತಿರುವ ಸಾಹಿತಿಗಳು, ಕಲಾವಿದರು, ಬುದ್ಧಿಜೀವಿಗಳಿಂದ ಹಿಡಿದು ಸಾಮಾನ್ಯ ಮನುಷ್ಯನವರೆಗೆ ಎಲ್ಲರೂ ದೇಶಾದ್ಯಂತ ಅಸಹಿಷ್ಣತೆಯ ವಿರುದ್ಧ ಧ್ವನಿ ಎತ್ತತೊಡಗಿದ್ದಾರೆ. ಈ ರೀತಿ ದನಿ ಎತ್ತುವವರ ದಮನ ಕಾರ್ಯವೂ ನಡೆಯುತ್ತಿದೆ. ಅವರನ್ನು ನಿಂದಿಸಿ-ಹಂಗಿಸಿ ನೈತಿಕವಾಗಿ ಕುಸಿದು ಹೋಗುವಂತೆ ಮಾಡುವ ಪ್ರಯತ್ನವೂ ಮುಂದುವರೆಯುತ್ತಿದೆ. ಇದು ಪ್ರಜಾತಂತ್ರಕ್ಕೆ ವಿರುದ್ಧವಾದ ನಡೆ ಎಂದು ಸಿಎಂ ಆತಂಕ ವ್ಯಕ್ತಪಡಿಸಿದರು.
Click this button or press Ctrl+G to toggle between Kannada and English