ಮಂಗಳೂರು: ಸಹಬಾಳ್ವೆಯ ಬದುಕನ್ನು ನಮ್ಮದಾಗಿಸಿಕೊಂಡು ಶಾಂತಿ, ಸಹನೆ, ಸಂಯಮವನ್ನು ಉಸಿರಾಗಿಸಿಕೊಳ್ಳೋಣ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು.
ನಗರದ ನೆಹರೂ ಮೈದಾನದಲ್ಲಿ ಇಂದು ಬೆಳಗ್ಗೆ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಂಭ್ರಮಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕರಾದ ಜೆ.ಆರ್.ಲೋಬೋ, ಬಿ.ಎ.ಮೊಯ್ದಿನ್ ಬಾವ, ಮೇಯರ್ ಕವಿತಾ ಸನಿಲ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಅಪರ ಜಿಲ್ಲಾಧಿಕಾರಿ ಕುಮಾರ್, ಸುರೇಶ್ ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಆರು ಮಂದಿ ಸಾಧಕರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಬ್ದುಲ್ ಹಮೀದ್, ಪ್ರಕಾಶ್ ಮರಾಠೆ ಅವರಿಗೆ ಜೀವರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Click this button or press Ctrl+G to toggle between Kannada and English